






ಬಂಟ್ವಾಳ: ಸಿಲ್ ಡೌನ್ ಮಾಡಿರುವ ಬಂಟ್ವಾಳ ಪೇಟೆಯಲ್ಲಿ ಬೆಳ್ಳಂ ಬೆಳಿಗ್ಗೆಯೇ ತಹಶೀಲ್ದಾರರು ಪರಿಶೀಲನೆ ನಡೆಸಿದರು.
ಅಲ್ಲಿನ ಜನರ ಭದ್ರತೆಗೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಿದ್ದಾರೆ. ಯಾರು ಕೂಡ ಮನೆಯಿಂದ ಹೊರ ಬರದಂತೆ ನೋಡಿಕೊಳ್ಳುವ ಬಗ್ಗೆ ಪೋಲೀಸರಿಗೆ ತಿಳಿಸಿದ್ದಾರೆ. ಸ್ಥಳದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ನಾಗರಾಜ್, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಗ್ರಾಮಕರಣಿಕರಾದ ರಾಜು, ಜನಾರ್ಧನ ಸಿಬ್ಬಂದಿ ಮೋಹನ್ ದಾಸ್ ಉಪಸ್ಥಿತರಿದ್ದರು.





