



ಬಂಟ್ವಾಳ: ಸರಕಾರಿ ಅಧಿಕಾರಿಗಳ ಕರ್ತವ್ಯ ಕ್ಕೆ ತಂಡವೊಂದು ಅಡ್ಡಿಪಡಿಸಿದ ಘಟನೆ ಬಂಟ್ವಾಳ ತಾಲೂಕಿನ ತಾಲೂಕಿನ ಪುರಸಭಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ಅಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಕೊರೊನಾ ಸಂದರ್ಭದಲ್ಲಿರುವ ಕರ್ತವ್ಯದಲ್ಲಿರುವ
ಫ್ಲೈಯಿಂಗ್ ಸ್ಕ್ವಾಡ್ ನ ಪುರಸಭಾ ಮಹಿಳಾ ಅಧಿಕಾರಿ ಯಾಸ್ಮೀನ್ ಅವರ ತಂಡಕ್ಕೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಅವಧಿಮೀರಿಯೂ ಅಂಗಡಿಗಳನ್ನು ತೆರದಿಟ್ಟ ವರನ್ನು ಬಂದ್ ಮಾಡುವಂತೆ ತಿಳಿಸಿದಾಗ ಮತ್ತು ಲಾಕ್ ಡೌನ್ ಅವಧಿಯಲ್ಲಿ ಅನಗತ್ಯವಾಗಿ ಬೈಕಿನಲ್ಲಿ ತಿರುಗಾಟ ನಡೆಸುವವರಿಗೆ ಯಾಕೆ ತಿರುಗುತ್ತೀರಿ ಎಂದು ಪ್ರಶ್ನೆ ಮಾಡಿದ ಅಧಿಕಾರಿಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಅಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ನಗರ ಪೋಲೀಸರು ಬಲೆಬೀಸಿದ್ದಾರೆ.






