Saturday, April 6, 2024

ಪಾದರಾಯನಪುರದ ಗಲಾಟೆ ವಿರುದ್ಧ ಎಚ್ಡಿಕೆ ಖಂಡನೆ

ಬೆಂಗಳೂರು: ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ದೇಶದ ಸ್ವಾಸ್ಥ್ಯಕಿಂತ ಬೇರಾವುದೂ ಮುಖ್ಯವಲ್ಲ. ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದು. ಕಾನೂನು ಕೈಗೆತ್ತಿಕೊಂಡು ಗೂಂಡಾಗಿರಿ,ದೌರ್ಜನ್ಯ ನಡೆಸಿರುವುದು ಅಕ್ಷಮ್ಯ ಅಪರಾಧ. ಯಾವುದೇ ಧರ್ಮದವರಿರಲಿ ಈ ದೇಶದ ಕಾನೂನಿಗೆ ತಲೆ ಬಾಗಿಸಬೇಕು. ಇಂತಹ ಅತಿರೇಕದ ಹುಚ್ಚಾಟಗಳನ್ನು ಯಾರೂ ಪ್ರದರ್ಶಿಸ ಕೂಡದು. ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು ಎಂದರು.

ಇಡೀ ಜಗತ್ತು ಎದುರಿಸುತ್ತಿರುವ ಕರೋನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ. ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು ಎಂದು ಪಾದರಾಯನಪುರದ ಪುಂಡಾಟರ ವಿರುದ್ಧ ಮಾತನಡಿದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...