ಬೆಂಗಳೂರು: ದೇಶಾದ್ಯಂತ ಮಾರಕ ಕೊರೊನಾ ವೈರಸ್ ತಲ್ಲಣ ಸೃಷ್ಟಿಸಿದ್ದು, ಆತಂಕ ತಂದೊಡ್ಡಿದೆ. ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ, ಪೊಲೀಸ್ ಸಿಬ್ಬಂದಿಗೂ ಮಾರಕ ಸೋಂಕು ತಗುಲಿರುವುದು ಇನ್ನಷ್ಟು ಭೀತಿ ಸೃಷ್ಟಿಸಿದೆ. ಏತನ್ಮಧ್ಯೆ ಮಹಾರಾಷ್ಟ್ರದಲ್ಲಿ 53 ಪತ್ರಕರ್ತರಲ್ಲಿ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ರಾಜ್ಯದಲ್ಲೂ ಪತ್ರಕರ್ತರಿಗೆ ಕೋವಿಡ್ -19 ಟೆಸ್ಟ್ ಮಾಡಿಸಲು ಸಚಿವ ಸುರೇಶ್ ಕುಮಾರ್ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಪತ್ರಕರ್ತರಿಗಾಗಿಯೇ ಮಹಾರಾಷ್ಟ್ರ ಸರ್ಕಾರದಿಂದ ವಿಶೇಷ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಇದರಲ್ಲಿ 167ಕ್ಕೂ ಅಧಿಕ ಜನರನ್ನು ತಪಾಸಣೆಗೆ ಒಳಪಡಿಸಿ ರಕ್ತ ಹಾಗೂ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 53 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿತ್ತು. ಮಾಧ್ಯಮ ಸಿಬ್ಬಂದಿ ತಮ್ಮ ಆರೋಗ್ಯವನ್ನು ಲೆಕ್ಕಿಸದೇ ಹಗಲಿರುಳು ಸುದ್ದಿ ಬಿತ್ತರಿಸುವಲ್ಲಿ ಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಪತ್ರಕರ್ತರಿಗೆ ಕೊರೊನಾ ಟೆಸ್ಟ್ ಮಾಡಿಸಬೇಕಾದ ಅಗತ್ಯತೆ ಇದೆ ಎಂದು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here