



ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದೃಢವಾದ ಹಿನ್ನೆಲೆಯಲ್ಲಿ ಸುಮಾರು 21 ಸಾವಿರ ಕುಟುಂಬಗಳನ್ನೊಳಗೊಂಡ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೀಲ್ ಡೌನ್ ಮಾಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಪ್ರತಿ ಮನೆಯವರ ಆರೋಗ್ಯ ತಪಾಸಣೆ ಮಾಡುವ ಕಾರ್ಯ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು ಹಾಗೂ ಅಧಿಕಾರಿಗಳಿಂದ ನಡೆಯುತ್ತಿದೆ.
ದ.ಕ.ಉಡುಪಿ ಸೇರಿದಂತೆ ರಾಷ್ಟ್ರದ ಬೇರೆ ಬೇರೆ ಕಡೆಗಳಲ್ಲಿ ವಾಸಿಸುತ್ತಿರುವ ಕನ್ನಡಿಗರು, ಜೀವನ ಕಟ್ಟಿಕೊಂಡಿದ್ದು, ಈ ಕೊರೊನಾ ಹಿನ್ನೆಲೆಯಲ್ಲಿ ಆತಂಕಿತರಾಗಿ ಅಭದ್ರತೆಯಲ್ಲಿದ್ದಾರೆ.
ಅಂತವರ ಆರೋಗ್ಯ, ಉಟೋಪಚಾರ ಕನಿಷ್ಟ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಿಕೊಡಬೇಕು, ಹಾಗು ಒಂದು ಹೆಲ್ಪ್ ಲೈನ್ ಆರಂಭ ಮಾಡಬೇಕು ಎಂದು ಮುಖ್ಯ ಮಂತ್ರಿ ಅವರಿಗೆ ಮನವಿ ಮಾಡಲಾಗಿದೆ.





