



ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣಾ ಅಧಿಕಾರಿ, ಸಿಬ್ಬಂದಿಯವರು ತಮ್ಮ ಠಾಣಾ ವ್ಯಾಪ್ತಿಯ ಪ್ರತೀ ಗಸ್ತಿನ ತಲಾ2 ಅಶಕ್ತ ಕುಟುಂಬಗಳಿಗೆ 70 ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ಮಂಗಳವಾರ ವಿತರಿಸಲಾಯಿತು.
ನೂತನ ಗಸ್ತು ವ್ಯವಸ್ಥೆಯ ಜನಸ್ನೇಹಿ ಪೊಲೀಸ್ ವ್ಯವಸ್ಥೆಯಂತೆ ಬೆಳ್ತಂಗಡಿ ಪಿಎಸ್ಐ ನಂದಕುಮಾರ್ ಎಂ.ಎಂ. ಅವರ ನೇತೃತ್ವದಲ್ಲಿ ಠಾಣಾ ಎಲ್ಲಾ ಅಧಿಕಾರಿ, ಸಿಬ್ಬಂದಿಯವರು ತಮ್ಮ ವೇತನದಿಂದ ಅಗತ್ಯ ವಸ್ತುಗಳ ಕಿಟ್ ತಯಾರಿಸಿ ಹಂಚಿಕೆ ಮಾಡಿದ್ದಾರೆ.
ಕೋವಿಡ್-19 ತಡೆಗಟ್ಟಲು ಸರಕಾರದ ಆದೇಶದಂತೆ ಕಳೆದ ಒಂದು ತಿಂಗಳಿನಿಂದ ಅವಿರತ ಶ್ರಮಿಸುತ್ತಿರುವ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಶಕ್ತ ಕುಟುಂಬಗಳಿಗೆ ಸಹಾಯ ಮಾಡುವ ಮೂಲಕ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.





