



ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ಕೋವಿಡ್ 19 ಸೋಂಕಿನ ಪ್ರಭಭಾವ ಮತ್ತು ನಿಯಂತ್ರಣ ಕ್ರಮಗಳ ಕುರಿತು ಪರಾಮರ್ಶೆ ನಡೆಸಲು ಹಾಗೂ ಆರ್ಥಿಕ ಚಟುವಟಿಕೆ ಪ್ರಾರಂಭಿಸುವ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದರು.
ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ಸಚಿವರಾದ ಆರ್. ಅಶೋಕ, ಬಸವರಾಜ ಬೊಮ್ಮಾಯಿ, ಬಿ. ಶ್ರೀರಾಮುಲು, ಎಸ್.ಟಿ. ಸೋಮಶೇಖರ್, ಎಸ್. ಸುರೇಶ್ ಕುಮಾರ್ , ಶಿವರಾಮ ಹೆಬ್ಬಾರ್, ಕೋಟ ಶ್ರೀನಿವಾಸ ಪೂಜಾರಿ, ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.





