ಬೆಂಗಳೂರು: ರಾಜ್ಯದಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ 8 ಕಲಬುರ್ಗಿ, 1 ಬೆಳಗಾವಿ, 1 ದಾವಣಗೆರೆ ಮತ್ತು ಮೈಸೂರಿನ ನಂಜನಗೂಡಿನಲ್ಲಿ 1 ಪ್ರಕರಣ ದಾಖಲಾಗಿವೆ.

ದ.ಕ. ಜಿಲ್ಲೆಯ ಎಲ್ಲಾ ವರದಿಗಳು ನೆಗೆಟಿವ್ ಬಂದಿರುವುದಾಗಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೆಶ್ ತಿಳಿಸಿದರು. ದ.ಕ. ಜಿಲ್ಲೆಯ 390 ವರದಿಗಳು ನೆಗೆಟಿವ್ ಬಂದಿದ್ದು, ಜಿಲ್ಲೆಯ ಜನತೆಗೆ ಸಮಧಾನಕರ ವಿಷಯವಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 534ಕ್ಕೆ ಏರಿಕೆಯಾಗಿದ್ದು, ಸೋಂಕಿನಿಂದಾಗಿ 20 ಜನ ಈವರೆಗೆ ಮೃತಪಟ್ಟಿದ್ದಾರೆ. 216 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here