ಬಂಟ್ವಾಳ: ಕೊರೋನಾ ವೈರಸ್ ತಡೆಯುವ ನಿಟ್ಟಿನಲ್ಲಿ ಮೇ.4 ರಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರೆದಿದ್ದು, ಮೇ.17ರ ವರೆಗೆ ಮುಂದುವರೆಯಲಿದೆ.

ಆದರೆ ರಾಜ್ಯ ಸರ್ಕಾರ ಕೆಲವೊಂದು ಪ್ರದೇಶಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಿದ್ದು, ದ.ಕ. ಜಿಲ್ಲೆಯಲ್ಲೂ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಅದರಂತೆ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯ ವರೆಗೆ ಓಡಾಟಕ್ಕೆ ಅವಕಾಶವಿದೆ.

ಈ ಬಗ್ಗೆ ನಾಳೆಯಿಂದ ದ.ಕ. ಜಿಲ್ಲೆಯಲ್ಲಿ ಏನಿರುತ್ತೆ..ಏನಿರಲ್ಲ.. ಎಂಬ ಸಂಪೂರ್ಣ ಮಾಹಿತಿ ಇಂದು ದ.ಕ. ಜಿಲ್ಲಾಡಳಿತ ಅಧಿಕೃತ ಆದೇಶ ಹೊರಡಿಸಿದೆ.

ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ.

ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೂ ಅನುಮತಿ ನೀಡಿದ್ದು, ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅವಕಾಶವಿದೆ.

ಸ್ಥಳೀಯ ಅಂಗಡಿಗಳು, ವಸತಿ ಸಂಕೀರ್ಣಗಳ ಶಾಪ್, ಸಣ್ಣಪುಟ್ಟ ಶಾಪ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ 33% ಸಿಬ್ಬಂದಿ ಬಳಸಿ ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಅಗತ್ಯ ಸೇವೆಗಳಿಗೆ ಇ-ಕಾಮರ್ಸ್ ಸಂಸ್ಥೆಗಳಿಗೆ ಅವಕಾಶ ನೀಡಲಾಗಿದೆ. ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ ನೀಡಿದ್ದು,  ಸ್ಥಳದಲ್ಲಿದ್ದ ಕಾರ್ಮಿಕರ ಬಳಕೆಗೆ ಸೂಚನೆ ನೀಡಿದ್ದು, ಹೊರಗಿನಿಂದ ಕಾರ್ಮಿಕರು ಬರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಅಂಗಡಿ ತೆರೆಯಲಷ್ಟೇ ಅನುಮತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ಏನ್ ಏನ್ ಇರೋಲ್ಲ ಅಂತ ನೋಡೋದಾದ್ರೆ.. ಹೊಟೇಲ್ ಬಾರ್, ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಫೂಲ್, ಪಾರ್ಕ್, ಸೆಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್ ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ಬಂದ್ ಇರಲಿವೆ. ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ನಿಷೇದಿಸಲಾಗಿದೆ. ಸಂಜೆ. 7 ರಿಂದ ಬೆಳಿಗ್ಗೆ .7ರ ವರೆಗೆ ಎಲ್ಲಾ ರೀತಿಯ ಸಂಚಾರ, ಸೇವೆ ಬಂದ್ ಮಾಡಲು ಆದೇಶಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here