ವಿಟ್ಲ: ಕೋವಿಡ್ 19 ಕೊರೋನ ಹಾವಳಿಯಿಂದ ಲಾಕ್ ಡೌನ್ ಸಂದರ್ಭ ಸಂಕಷ್ಟಕ್ಕೀಡಾಗಿರುವ ವಿಟ್ಲ ಪರಿಸರ ದ ಬಡ ಕುಟುಂಬಗಳಿಗೆ ಸಂಘ ಸಂಸ್ಥೆಗಳಿಂದ ಹಾಗೂ ದಾನಿಗಳಿಂದ ನೀಡಲ್ಪಡುವ ಆಹಾರ ಧಾನ್ಯಗಳ ಕಿಟ್ ಅನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂಚಾಲಿತ ಸೇವಾ ಭಾರತಿಯ ಸಹಾಯವಾಣಿ ಕೇಂದ್ರಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸರಳವಾಗಿ ಲಾಕ್‍ಡೌನ್ ನಿಯಮದಂತೆ ನಡೆಯಿತು.
ಪುತ್ತೂರು ಶಾಸಕ ಸಂಜೀವ ಮಠಂದೂರು ಕಿಟ್‍ಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷ ಹೆಚ್. ಜಗನ್ನಾಥ ಸಾಲಿಯಾನ್, ವಿಟ್ಲ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‍ನ ಅಧ್ಯಕ್ಷರು ನರಸಪ್ಪ ಪೂಜಾರಿ, ನಿರ್ದೇಶಕರುಗಳು, ಅಧ್ಯಾಪಕರ ಸಹಕಾರಿ ಸಂಘ ವಿಟ್ಲದ ಪ್ರಧಾನ ವ್ಯವಸ್ಥಾಪಕ ಕೃಷ್ಣಪ್ರಕಾಶ್, ದೇವತಾ ಸಮಿತಿ ವಿಟ್ಲ ಇದರ ಅಧ್ಯಕ್ಷ, ವಿಶ್ವ ಹಿಂದು ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬಾಲಗೋಕುಲ ಸಮಿತಿ ವಿಟ್ಲ ಕ್ಷೇತ್ರದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ದಾನಿಗಳಾದ ಸುಬ್ರಾಯ ಪೈ, ಸುಭಾಸ್‍ಚಂದ್ರ ನಾಯಕ್, ರಾಮ್‍ಪ್ರಕಾಶ್ ನಾಯಕ್, ಸತ್ಯ ಗಣೇಶ್, ಜಗದೀಶ್ ಪಾಣೆಮಜಲು,ಭಾಸ್ಕರ್ ರೈ, ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಟ್ಲ ಇದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here