ಮಂಗಳೂರು: ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಆತಂಕದ ಹಿನ್ನೆಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‍ನಿಂದ ಪತ್ರಿಕಾ ಭವನದಲ್ಲಿ ಮಾ.23ರಿಂದ ರದ್ದುಪಡಿಸಿದ್ದ ಪತ್ರಿಕಾಗೋಷ್ಠಿಗಳನ್ನು ಮೇ 11ರಿಂದ ಮರು ಆರಂಭಿಸಲಾಗುತ್ತದೆ.
ಪಕ್ಕದ ಜಿಲ್ಲೆಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ಕಠಿಣ ಕ್ರಮಗಳನ್ನು ಕೈಗೊಂಡ ಹಿನ್ನೆಲೆಯಲ್ಲಿ ಹಲವು ಮಂದಿ ಸೇರುವ ಪ್ರೆಸ್ ಕ್ಲಬ್‍ನಲ್ಲಿ ಪತ್ರಕರ್ತರ ಆರೋಗ್ಯದ ದೃಷ್ಠಿಯಿಂದ ಪ್ರೆಸ್ ಕ್ಲಬ್ ಬಂದ್‍ನಂತಹ ಅನಿವಾರ್ಯ ಕ್ರಮ ಕೈಗೊಂಡು, ನಂತರ ಅದನ್ನು ಮುಂದುವರಿಸಲಾಗಿತ್ತು.
ಇದೀಗ ಸಾರ್ವಜನಿಕ ಹಿತದೃಷ್ಟಿಯಿಂದ ಪತ್ರಿಕಾಗೋಷ್ಠಿಗಳನ್ನು ಆರಂಭಿಸಲಾಗುತ್ತದೆ. ಪ್ರೆಸ್ ಕ್ಲಬ್‍ನಲ್ಲಿ ಸುರಕ್ಷಾ ಕ್ರಮಗಳ ಜತೆಗೆ ಸಾಮಾಜಿಕ ಅಂತರ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಸುದ್ದಿ ಮಾಡುವ ಪತ್ರಕರ್ತರು ಮತ್ತು ಸಾರ್ವಜನಿಕರು ತಮ್ಮನ್ನು ಕೊರೊನಾ ವೈರಸ್‍ನಿಂದ ರಕ್ಷಿಸಿಕೊಳ್ಳಲು ಸ್ವಯಂ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಂಡು ಸಹಕರಿಸಬೇಕು. ಪತ್ರಿಕಾಗೋಷ್ಠಿ ನಡೆಸುವವರು ಪ್ರೆಸ್‍ಕ್ಲಬ್ ದೂರವಾಣಿ ಸಂಖ್ಯೆ 0824 2450111 ಸಂಪರ್ಕಿಸಬಹುದು ಎಂದು ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here