ಮಂಗಳೂರು: ಮೂಲತಃ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ಕರ್ಕಿಕೋಡಿ ನಿವಾಸಿ, ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ಉಪಸಂಪಾದಕಿ, ಸಾಹಿತಿ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ (44) ಅಸೌಖ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.
ಅವರು ಹಿರಿಯ ಸಾಹಿತಿ ವಿ.ಗ. ನಾಯಕ ಮತ್ತು ಶ್ಯಾಮಲಾ ಕರ್ಕಿಕೋಡಿ ಅವರ ಪುತ್ರಿ.
ಸೀತಾಲಕ್ಷ್ಮೀ ಅವರು ಅಡ್ಯನಡ್ಕದಲ್ಲಿ ಪ್ರಾಥಮಿಕ ಶಿಕ್ಷಣವನ್ನು ಆರಂಭಿಸಿ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪದವಿ ವ್ಯಾಸಂಗ ಪಡೆದರು. ಬಳಿಕ ಮಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು. ‘ಮಾಸ್ತಿಯವರ ಕತೆಗಳಲ್ಲಿ ಸ್ತ್ರೀ ಪ್ರತಿನಿಧೀಕರಣ’ ಎಂಬ ಮಹಾಪ್ರಬಂಧಕ್ಕೆ ಹಂಪಿ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಹಾಗೂ ಕನ್ನಡ ಪತ್ರಿಕೋದ್ಯಮದಲ್ಲಿ ಸ್ತ್ರೀ ಪರತೆ ಸಂಶೋಧನಾ ಪ್ರೌಢ ಪ್ರಬಂಧಕ್ಕೆ ಮುಂಬಯಿ ವಿವಿ ಪಿಎಚ್‌ಡಿ ಪದವಿ ಪ್ರದಾನಿಸಿ ಗೌರವಿಸಿದೆ. ಸಾಹಿತ್ಯ ಲೋಕಕ್ಕೆ ತನ್ನದೇ ಆದ ಸೇವೆ ನೀಡಿದ ಸೀತಾಲಕ್ಷ್ಮೀ ಅವರು ಪರಾಮರ್ಶೆ, ಮುಕ್ತಮಾತು, ಆ ಕ್ಷಣದಲ್ಲಿ, ರಂಗಕರ್ಮಿ ಸದಾನಂದ ಸುವರ್ಣ ಸಂಪದ, ರಂಗಚೇತನ ಸದಾನಂದ ಸುವರ್ಣ, ಕಮಲಾದೇವಿ ಚಟ್ಟೋಪಾಧ್ಯಾಯ, ಬಿ.ವಿ. ಅರ್ತಿಕಜೆ ಮುಂತಾದ ಹತ್ತಾರು ಕೃತಿಗಳನ್ನು ರಚಿಸಿದ್ದು, ಅವರಿಗೆ ಬನ್ನಂಜೆ ರಾಮಾಚಾರ್ಯ ಪ್ರಶಸ್ತಿ, ಜೆಡಿಎ ಪ್ರಶಸ್ತಿ ಲಭಿಸಿದೆ.
ಕಳೆದ ಹಲವು ವರ್ಷಗಳಿಂದ ತಂದೆ, ತಾಯಿ ಜತೆ ಮಂಗಳೂರಿನ ಕೊಟ್ಟಾರ ಚೌಕಿಯ ಬಳಿ ವಾಸವಾಗಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here