Wednesday, October 18, 2023

ಪಂಪ್‌ವೆಲ್‌ ಮೇಲ್ಸೇತುವೆಯಲ್ಲಿ ಟೆಂಪೋ- ಟಿಪ್ಪರ್ ಡಿಕ್ಕಿ

Must read

ಮಂಗಳೂರು : ಪಂಪ್‌ವೆಲ್‌ ಮೇಲ್ಸೇತುವೆಯಲ್ಲಿ ಟೆಂಪೋ ಟಿಪ್ಪರ್‌ಗೆ ಢಿಕ್ಕಿ ಹೊಡೆದ ಘಟನೆ ನಡೆದಿದ್ದು, ಟೆಂಪೋ ಚಾಲಕನ ಸ್ಥಿತಿ ಗಂಭೀರವಾಗಿದೆ. ಟೆಂಪೋ ಬೈಕಂಪಾಡಿಯಿಂದ ಕಾಸರಗೋಡಿಗೆ ತರಕಾರಿ ಸಾಗಾಟ ಮಾಡುತ್ತಿದ್ದು, ಪಂಪ್‌ವೆಲ್‌ ಮೇಲ್ಸೇತುವೆಯಲ್ಲಿ ಟಿಪ್ಪರ್‌ಗೆ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಗಾಯಗೊಂಡಿರುವ ಚಾಲಕನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಟ್ರಾಫಿಕ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More articles

Latest article