ಸಾರ್ವಜನಿಕರ ಗಮನಕ್ಕೆ:
ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಬೇರೆ ಬೇರೆ ರಾಜ್ಯಗಳಲ್ಲಿದ್ದವರು ತಮ್ಮ ತಮ್ಮ ಊರುಗಳಿಗೆ ಸರ್ಕಾರದ ನಿಯಮಗಳಿಗೆ ಒಳಪಟ್ಟು ಬರುತ್ತಿದ್ದು, ಸಮಾಜದ ಆರೋಗ್ಯದ ಹಿತದ್ರಿಷ್ಟಿಯಿಂದ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲೆ ಯಾ ಇನ್ನಿತರೆ ಸಂಸ್ಥೆಗಳಲ್ಲಿ ಕ್ವಾರಂಟೈನ್ ನಲ್ಲಿಡುವ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇಂತಹ ಸಂದರ್ಭಗಳಲ್ಲಿ ಯಾರಿಂದಲಾದರೂ ಈ ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ಯಾ ತಡೆ ಉಂಟು ಮಾಡಿದಲ್ಲಿ ಅಂತವರ ವಿರುದ್ಧ ಸಾಂಕ್ರಾಮಿಕ ತಡೆ ಕಾಯ್ದೆ ಯ ಅಡಿಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಊರಿಗೆ ಬರುತ್ತಿರುವವರು ನಿಮ್ಮೊರಿನವರೇ ಆಗಿದ್ದು, ಎಲ್ಲರ ಹಿತದೃಷ್ಟಿಯಿಂದಲೇ ಜಿಲ್ಲಾಡಳಿತವು ಪ್ರತ್ಯೇಕವಾಗಿ ಅವರನ್ನು ಗ್ರಾಮಪಂಚಯತ್ ವ್ಯಾಪ್ತಿಯಲ್ಲೇ ಇರಿಕೊಳ್ಳಬೇಕಾದ ನಿಯಮವಿದ್ದು, ಅವರನ್ನು ಕರೆತರುವ ಸಮಯ ಎಲ್ಲ ರೀತಿಯ ಆರೋಗ್ಯ ತಪಾಸಣೆ ಮಾಡಲಾಗಿರುತ್ತದೆ. ನಿಮ್ಮೆಲ್ಲರ ಹಿತದೃಷ್ಟಿಯಿಂದ ಕೇವಲ ನಿಗಾ ಇಡುವ ಸಲುವಾಗಿ ಕ್ವಾರಂಟೈನ್ ಮಾಡಲಾಗುತ್ತದೆಯೇ ಹೊರತು, ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಈ ಪ್ರಕ್ರಿಯೆಗೆ ಸಾರ್ವಜನಿಕರು ಸಹಕರಿಸಲು ಕೋರಿದೆ ಜೊತೆಗೆ ಇದರ ವಿರುದ್ಧ ನಡೆಯುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
ಅಲ್ಲದೇ ಈ ಎಲ್ಲ ಪ್ರಕ್ರಿಯೆಗಳನ್ನು ಮಾಡುವಾಗ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಟಾಸ್ಕ್ ಫೋರ್ಸ್ ಸಂಪೂರ್ಣ ಸಹಕಾರ ಒಡಗಿಸಬೇಕಾಗಿದ್ದು, ಎಲ್ಲಿಯಾದರೂ ವ್ಯತ್ಯಯವಾದಲ್ಲಿ ಟಾಸ್ಕ್ ಫೋರ್ಸ್ ನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here