ಬೆಂಗಳೂರು: ರಾಜ್ಯದ ಹಲವೆಡೆ ಮೇ 15 ರಿಂದ 17 ರವರೆಗೆ 3 ದಿನಗಳ ಕಾಲ ಗಾಳಿ- ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಪ್ರದೇಶದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದ ಗಾಳಿ ಬೀಸುತ್ತಿದ್ದು, ಇದರಿಂದಾಗಿ ಕರಾವಳಿ ಪ್ರದೇಶದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಭಾಗದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here