Thursday, April 18, 2024

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಸ್ವೀಕಾರ

ಬಂಟ್ವಾಳ: ಮೇ 21ರಂದು ರಾಷ್ಟ್ರವ್ಯಾಪ್ತಿ  ಭಯೋತ್ಪಾದನೆ ವಿರೋಧಿ ದಿನಾಚರಣೆ ಅಂಗವಾಗಿ ಇಂದು ಗುರುವಾರ ತಹಶೀಲ್ದಾರ್ ರಶ್ಮಿ.ಎಸ್. ಆರ್ ಅವರ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಕಚೇರಿ ಸಿಬ್ಬಂದಿಗಳಿಂದ ಮಿನಿ ವಿಧಾನಸೌಧದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕಾದ ರಾಮ ಕೆ ಪ್ರತಿಜ್ಞಾ ವಿಧಿ ಬೋಧಿಸಿದರು.ಇದೇ ಸಂದರ್ಭದಲ್ಲಿ
ಬಂಟ್ವಾಳ ತಹಶೀಲ್ದಾರ್ ಮಾತನಾಡಿ
ಸತ್ಯ, ಅಹಿಂಸೆ,ಸಹನೆಗಳ ದ್ಯೋತಕವಾದ ನಮ್ಮ ದೇಶದಲ್ಲಿ ಭಯೋತ್ಪಾದನೆ ಪ್ರೇರಿತ ಹಿಂಸೆಯು ಕೊನೆಯಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಉಪತಹಸೀಲ್ದಾರರು, ಶಿರಸ್ತೇದಾರರು,
ತಾಲೂಕು ಕಚೇರಿ ಸಿಬ್ಬಂದಿಗಳು , ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...