ಬಂಟ್ವಾಳ: ಬಂಟ್ವಾಳ ಪೇಟೆಯಲ್ಲಿ ಸೀಲ್ ಡೌನ್ ವ್ಯಾಪ್ತಿಯಲ್ಲಿ ಸಡಿಲಿಕೆಯಾಗಿದೆ.

ಸರಕಾರದ ಹೊಸ ಆದೇಶದಂತೆ ಬಂಟ್ವಾಳ ಕಸ್ಬಾ ಗ್ರಾಮದ ಕಂಟೇನ್ಮೆಂಟ್ ಪ್ರದೇಶವನ್ನು ದ.ಕ.ಜಿಲ್ಲಾಡಳಿತ ಪರಿಷ್ಕರಣೆಗೊಳಿಸಿದ್ದು, ಹೀಗಾಗಿ ಬಂಟ್ವಾಳ ಪೇಟೆಯ ಮುಖ್ಯರಸ್ತೆ ಸೇರಿದಂತೆ ಬಹುತೇಕ ಮನೆ-ಅಂಗಡಿ ಮುಂಗಟ್ಟುಗಳು ಸೀಲ್ ಡೌನ್ ನಿಂದ ಮುಕ್ತಗೊಂಡಿದೆ.


ಹಾಲಿ ಬಂಟ್ವಾಳ ಕಸ್ಬಾ ಗ್ರಾಮದ ಪೂರ್ವದಲ್ಲಿ ಸದಾಶಿವ ಪ್ರಭು ಮನೆ, ಪಶ್ಚಿಮದಲ್ಲಿ ಸರಕಾರಿ ಘಟ್ಟರ್, ಉತ್ತರದಲ್ಲಿ ರವಿಚಂದ್ರ ಮನೆ, ದಕ್ಷಿಣದಲ್ಲಿ ಸುರೇಶ್ ದಾಮೋದರ ಬಾಳಿಗಾ ಮನೆ ಕಂಟೇನ್ಮೆಂಟ್ ವ್ಯಾಪ್ತಿಯಾಗಿರುತ್ತದೆ.
ಜತೆಗೆ ಪೂರ್ವದಲ್ಲಿ ಬಂಟ್ವಾಳ ಪೇಟೆಯ ರಥಬೀದಿ ಮುಖ್ಯರಸ್ತೆ, ಪಶ್ಚಿಮದಲ್ಲಿ ಎಸ್.ವಿ.ಎಸ್.ಶಾಲಾ ಮೈದಾನ, ಉತ್ತರದಲ್ಲಿ ಶಶಿಕಲಾ ಮನೆ, ದಕ್ಷಿಣದಲ್ಲಿ ಬಾಲಾಜಿ ಸರ್ವೀಸ್ ಸ್ಟೇಷನ್ ಬಫರ್ ಝೋನ್ ನಲ್ಲಿರುತ್ತದೆ.


ಬಫರ್ ಝೋನ್ ವ್ಯಾಪ್ತಿಯಲ್ಲಿ 97 ಮನೆಗಳು, 12 ಅಂಗಡಿಗಳು, 3 ಕಚೇರಿಗಳು ಒಳಗೊಳ್ಳಲಿದ್ದು, ಒಟ್ಟು 388 ಜನಸಂಖ್ಯೆ ಇರುತ್ತದೆ. ತಹಶೀಲ್ದಾರ್ ಅವರು ಇನ್ಸಿಡೆಂಟ್‌ ಕಮಾಂಡರ್ ಆಗಿರುತ್ತಾರೆ ಎಂದು ದ.ಕ.ಜಿಲ್ಲಾಧಿಕಾರಿಯವರು ಆದೇಶಿಸಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here