Monday, April 8, 2024

ಇನ್ನು ಮುಂದೆ ಪೊಲೀಸ್ ಪೇದೆ ಎನ್ನುವಂತಿಲ್ಲ, ಬರೆಯುವಂತಿಲ್ಲ

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಇಲಾಖೆಯ ಶ್ರೇಣಿವಾರು ಹುದ್ದೆಯ ಹೆಸರಿನಲ್ಲಿ ಬದಲಾವಣೆ ಮಾಡಲಾಗಿದೆ. ಇನ್ನು ಮುಂದೆ ‘ಪೊಲೀಸ್ ಪೇದೆ’ ಅನ್ನುವಂತಿಲ್ಲ.
ಹೌದು, ಕರ್ನಾಟಕ ಪೊಲೀಸ್ ಇಲಾಖೆಯ ಹೊಸ ಆದೇಶದ ಪ್ರಕಾರ ಇನ್ನು ಮುಂದೆ ಪೇದೆ, ಮುಖ್ಯ ಪೇದೆ ಎಂದು ಕರೆಯುವಂತಿಲ್ಲ, ಬರೆಯುವಂತೆಯೂ ಇಲ್ಲ. ಜನರ ಜೊತೆ ನೇರವಾಗಿ ಸಂಪರ್ಕದಲ್ಲಿರುವ ಏನಾದರೂ ಆದಾಗ ತಕ್ಷಣ ಓಡೋಡಿ ಬರುವವರಿಗೆ ಈ ಮೂಲಕ ಇಲಾಖೆ ಗೌರವ ನೀಡಿದೆ.
ಇನ್ನು ಮುಂದೆ ಪೇದೆಗಳನ್ನು ಕಾನ್ಸ್‌ಟೇಬಲ್, ಮುಖ್ಯ ಪೇದೆಯನ್ನು ಹೆಡ್ ಕಾನ್ಸ್‌ಟೇಬಲ್ ಎಂದು ಕರೆಯಬೇಕು. ಬರವಣಿಗೆಯಲ್ಲಿಯೂ ಸಹ ಇದೇ ಪದಗಳನ್ನು ಬಳಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಆದೇಶವೇನು? : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಕಾನ್ಸ್‌ಟೇಬಲ್, ಹೆಡ್ ಕಾನ್ಸ್‌ಟೇಬಲ್‌ಗಳನ್ನು ಸಾಮಾನ್ಯವಾಗಿ ಪೊಲೀಸ್ ಪೇದೆ, ಮುಖ್ಯ ಪೇದೆ ಎಂದು ಕರೆಯಲಾಗುತ್ತದೆ. ಆದರೆ, ಪೇದೆ ಎಂಬ ಪದದ ಉಪಯೋಗ ಅಷ್ಟು ಸಮಂಜಸವಾಗಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆದ್ದರಿಂದ, ಇನ್ನು ಮುಂದೆ ಬರವಣಿಗೆಯಲ್ಲಿ, ಮಾತಿನಲ್ಲಿ ಪೊಲೀಸ್ ಪೇದೆ, ಮುಖ್ಯ ಪೇದೆ ಎಂಬ ಪದಗಳನ್ನು ಬಳಸದೇ ‘ಪೊಲೀಸ್ ಕಾನ್ಸ್‌ಟೇಬಲ್’, ‘ಹೆಡ್ ಕಾನ್ಸ್‌ಟೇಬಲ್’ ಎಂಬ ಪದಗಳನ್ನು ಬಳಸುವಂತೆ ಆದೇಶಿಸಲಾಗಿದೆ.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...