ಬೆಂಗಳೂರು: ಕೆ‌ಎಸ್.ಆರ್.ಟಿ.ಸಿ.ಬಸ್ ಚಾಲಕನಿಗೂ ವಕ್ಕರಿಸಿದ ಕೊರೊನಾ ಸೊಂಕು. ಅ ಮೂಲಕ ಬಸ್ ನಲ್ಲಿ ಸಂಚಾರ ಮಾಡುವುದು ಕೂಡಾ ಅಷ್ಟು ಸೇಫ್ ಅಲ್ಲ ಎಂಬ ಭಾವನೆ ಜನರಲ್ಲಿ ಮೂಡಿದೆ.

ಮಾಗಡಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನಿಗೆ ಕೋವಿಡ್-19 ಸೋಂಕು ದೃಢವಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಅವರು ಇಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಲಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದರಿಂದ ಅವರ ಜೊತೆಗೆ ಪ್ರಯಾಣಿಸಿದವರನ್ನ ತಪಾಸಣೆ ಮಾಡಲು ಸಂಬಂದಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಕೋವಿಡ್-19 ನಿಯಂತ್ರಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಯುಷ್ ವೈದ್ಯರ ಪ್ರತಿಭಟನೆ ವಿಚಾರ,ಅವರ ಸಮಸ್ಯೆಗಳ ಸಂಬಂಧಪಟ್ಟಂತೆ ಈಗ ಸಭೆ ನಡೆಸಲಾಗುತ್ತಿದೆ. ಆಯುಷ್ ವೈದ್ಯರು ನನ್ನ ಮುಂದೆ ಹಲವು ಬೇಡಿಕೆಗಳನ್ನ ಇಟ್ಟಿದ್ದಾರೆ. ಸಾಕಷ್ಟು ವರ್ಷಗಳಿಂದ ಈ ಸಮಸ್ಯೆಗಳು ಹಾಗೇ ಇವೆ. ಎಂಬಿಬಿಎಸ್ ವೈದ್ಯರ ಸಮನಾಗಿ ಆಯುಷ್ ವೈದ್ಯರು ವೇತನ ಕೇಳಿದ್ದಾರೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ ಒಂದು ಸಮಿತಿ ಮಾಡುತ್ತೇವೆ. ಆ ಸಮಿತಿ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here