Saturday, April 13, 2024

ಜೂನ್‌‌‌ 1ರಂದು ದುಬೈನಿಂದ ಮಂಗಳೂರಿಗೆ ಆಗಮಿಸಲಿದೆ ಮೊದಲ ಚಾರ್ಟರ್ಡ್‌ ವಿಮಾನ

 

ಮಂಗಳೂರು : ಜೂನ್ 1 ರಂದು ದುಬೈನಿಂದ ಮೊದಲ ಚಾರ್ಟರ್ಡ್ ವಿಮಾನವು ರಾಸ್ ಅಲ್ ಖೈಮಾ ವಿಮಾನ ನಿಲ್ದಾಣದಿಂದ ಹೊರಡಲು ಅಣಿಯಾಗಿದೆ. ಫಾರ್ಚೂನ್ ಗ್ರೂಪ್ ಆಫ್ ಹೊಟೇಲ್‌ನ 105 ಸಿಬ್ಬಂದಿ ಚಾರ್ಟರ್ಡ್ ಸ್ಪೈಸ್ ಜೆಟ್ ವಿಮಾನದಲ್ಲಿ ಹಾರಾಟ ನಡೆಸಲಿದ್ದು, ಇದನ್ನು ಹೊಟೇಲ್‌‌ ಅಧ್ಯಕ್ಷ ಹಾಗೂ ಕರ್ನಾಟಕ ಅನಿವಾಸಿ ಭಾರತೀಯ ವೇದಿಕೆಯ (ಕೆಎನ್‌ಆರ್‌ಐ) ಅಧ್ಯಕ್ಷ ಪ್ರವೀಣ್ ಶೆಟ್ಟಿ ಏರ್ಪಡಿಸಿದ್ದಾರೆ.

ವಿಮಾನ ಬೆಳಿಗ್ಗೆ 9.45 ಕ್ಕೆ ಹೊರಡಲಿದ್ದು, ಒಟ್ಟು 180 ಪ್ರಯಾಣಿಕರನ್ನು ಹೊತ್ತುತರಲಿದೆ ಎಂದು ಭಾರತದ ಕಾನ್ಸುಲ್ ಜನರಲ್ ದುಬೈಗೆ ತಿಳಿಸಿದ್ದಾರೆ ಎಂದು ವಿಫುಲ್‌‌ ಹೇಳಿದ್ದಾರೆ. ಕೊರೊನಾ ವೈರಸ್‌‌ ಹಿನ್ನಲೆ ಲಾಕ್‌‌ಡೌನ್‌ ಜಾರಿಯಾದ ಕಾರಣ ಎಲ್ಲಾ ಅಂತರಾಷ್ಟ್ರೀಯ ವಿಮಾನಯಾನಗಳನ್ನು ಸ್ಥಗಿತಗೊಳಿಸಲಾಗಿದ್ದರಿಂದ ಮೇ. 26 ರಂದು ದುಬೈಯಲ್ಲಿರುವ ಭಾರತೀಯರನ್ನು ಹಿಂತಿರುಗಿಸುವ ಸಲುವಾಗಿ ಚಾರ್ಟರ್ಡ್ ಫ್ಲೈಟ್‌ಗಳನ್ನು ನಿರ್ವಹಿಸಲು ಸರ್ಕಾರ ಖಾಸಗಿ ಕಂಪನಿಗಳಿಗೆ ಅಧಿಕಾರ ನೀಡಿತು. ಈ ಬಗ್ಗೆ ವಿಫುಲ್‌ ಅವರು ಮಾತನಾಡಿದ್ದು, ದುಬೈನಿಂದ ಜೂನ್‌‌ 1ರಂದು ನಿಗದಿಯಾದ ವಿಮಾನ ಯುಎಇಯ ಮೊದಲ ವಿಮಾನವಲ್ಲ. ವಂದೇ ಭಾರತ್‌ ವಿಮಾನಗಳಲ್ಲಿ ಮಾಡಿದ ರೀತಿಯಲ್ಲೇ ಇದನ್ನು ಮಾಡಲಾಗುತ್ತಿರುವುದರಿಂದ ಎಲ್ಲಾ ಪ್ರಯಾಣಿಕರಿಗೆ ಐಜಿಜಿ / ಐಜಿಎಂ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದರು.
ಕೊವಿಡ್-19 ಆರಂಭವಾದ ಬಳಿಕ ಏಳು ಹೊಟೇಲ್‌‌‌‌ನಲ್ಲಿ ಮೂರು ಹೊಟೇಲ್‌‌ಗಳಲ್ಲಿ ಸಂಪೂರ್ಣವಾಗಿ ಕಾರ್ಯನಿರ್ವಹಿಸದ ಕಾರಣ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಅದೂ ಅಲ್ಲದೆ ಯಾವುದೇ ನೌಕರರ ವೀಸಾಗಳನ್ನು ರದ್ದುಪಡಿಸಲಾಗಲಿಲ್ಲ. ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಬಂದ ನಂತರ ಅವರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು. ದುಬೈನಿಂದ ವಾಪಾಸ್ಸಾಗಿರುವ ಸಿಬ್ಬಂದಿಗಳು ಮಂಗಳೂರು, ಉಡುಪಿ, ಕಾಸರಗೋಡು ಹಾಗೂ ಕುಂದಾಪುರದವರು ಎಂದು ತಿಳಿಸಿದರು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...