



ನವದೆಹಲಿ: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ 4 ಹಂತಗಳ ಲಾಕ್ ಡೌನ್ ಘೋಷಿಸಿದ್ದು, ಅದು ನಾಳೆ ಎಂದರೆ ಮೇ.30 ಕ್ಕೆ ಕೊನೆಯಾಗಬೇಕಿತ್ತು. ಆದರೆ ಇಂದು ಕೇಂದ್ರ ಸರ್ಕಾರ ಲಾಕ್ ಡೌನ್ ಜೂನ್ 7 ರ ವರೆಗೆ ವಿಸ್ತರಿಸಲು ತೀರ್ಮಾನಿಸಿದೆ.
ಕೇಂದ್ರ ಗೃಹ ಇಲಾಖೆ ದೇಶಾದ್ಯಂತ 5ನೇ ಹಂತದ ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ನಿರ್ದೇಶನ ನೀಡಿದ್ದು, ಜೂನ್ 30ರ ತನಕ ಲಾಕ್ ಡೌನ್ ವಿಸ್ತರಿಸಲಾಗಿದೆ. ಧಾರ್ಮಿಕ ಕೇಂದ್ರಗಳು, ಮಾಲ್, ಹೋಟೆಲ್ ಗಳನ್ನು ಜೂನ್ 8 ರಂದು ಪುನರಾರಂಭಿಸಲು ಕೇಂದ್ರ ಸೂಚನೆ ನೀಡಿದೆ.
ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮೊದಲನೇ ಹಂತದಲ್ಲಿ ಧಾರ್ಮಿಕ ಕೇಂದ್ರಗಳು ತೆರೆಯಲು ಅವಕಾಶವನ್ನು ನೀಡಲಾಗಿದೆ. ಜೂನ್ 8 ರಿಂದ ಎಲ್ಲಾ ಧಾರ್ಮಿಕ ಕೇಂದ್ರಗಳು ತೆರೆದುಕೊಳ್ಳಲಿವೆ. ದೇವಸ್ಥಾನಗಳು, ಮಾಲ್, ಹೋಟೆಲ್ ಆರಂಭಿಸಲು ಜೂನ್ 8ರಿಂದ ಅನುಮತಿ ನೀಡಬಹುದೆಂದು ಕೇಂದ್ರ ಗೃಹ ಇಲಾಖೆ ಸೂಚಿಸಿದೆ.
ಕಂಟೈನ್ಮೆಂಟ್ ಹೊರತುಪಡಿಸಿ ಉಳಿದೆಲ್ಲೆಡೆ ಲಾಕ್ ಡೌನ್ ಸಡಿಲಿಕೆ ಮಾಡಲು ತೀರ್ಮಾನಿಸಿದೆ. ಇನ್ನು ದೇಶಾದ್ಯಂತ ರಾತ್ರಿ ಕರ್ಫ್ಯೂ ಮುಂದುವರಿಯಲಿದ್ದು, ರಾತ್ರಿ 9 ರಿಂದ ಬೆಳಿಗ್ಗೆ 5 ರ ವರೆಗೆ ಇರಲಿದೆ.
ಮೊದಲನೇ ಹಂತದಲ್ಲಿ ಶಾಲಾ ಕಾಲೇಜುಗಳನ್ನು ತೆರೆಯಲು ಅನುಮತಿ ನೀಡಿಲ್ಲ. ಎರಡನೇ ಹಂತದಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಚರ್ಚಿಸಿದ ನಂತರ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳು ಮತ್ತು ತರಬೇತಿ ಸಂಸ್ಥೆಗಳನ್ನು ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಕೇಂದ್ರ ತಿಳಿಸಿದೆ.





