ಮಂಗಳೂರು : ಕಲ್ಲಾಪು ಬಳಿಯಲ್ಲಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಐವರು ಗಾಯಗೊಂಡ ಘಟನೆ ಮೇ. 31 ರ ಭಾನುವಾರ ಮುಂಜಾನೆ ನಡೆದಿದೆ.

ಮೃತನನ್ನು ಕಾವೂರು ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ.

ಬೆಳಿಗ್ಗೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು ಚೇತನ್ ಕಾರು ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ. ಲಾರಿಗೆ ಕಾರು ಹಿಂದಿನಿಂದ ನುಗ್ಗಿದ್ದು ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here