


ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಕಾಟ ದಿನದಿಂದ ದಿನಕ್ಕೆ ಮುಂದುವರೆದಿದ್ದು. ಕೇವಲ 24 ಗಂಟೆಗಳಲ್ಲಿ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 9,851 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 273 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. 9,851 ಮಂದಿಗೆ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 2,26,770 ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 1,09,462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,10,960 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನ 273 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 6,348 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.





