



ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ವಿಟ್ಲ ಪೋಲೀಸ್ ಠಾಣೆ ವ್ಯಾಪ್ತಿಯ ಮಾಣಿ ಸುತ್ತಮುತ್ತ ಇಂದು ಅಪಘಾತಗಳ ಸರಮಾಲೆ.ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೆ ಪಾರಾದ ಪ್ರಯಾಣಿಕರು.
ರಾಷ್ರ್ಟೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯಲ್ಲಿ ಪೇರಮೊಗರು ಸಮೀಪ ಮಾರುತಿ 800 ಕಾರು ರಸ್ತೆ ಪಕ್ಕದ ಬೃಹತ್ ಹೊಂಡಕ್ಕೆ ಬಿದ್ದು ಜಖಂಗೊಂಡಿದೆ .ಅದರಲ್ಲಿದ್ದ ಪ್ರಯಾಣಿಕರು ಹಾಗೂ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಮಾಣಿ ಸಮೀದ ಬುಡೋಳಿ ಜಂಕ್ಷನಲ್ಲಿ ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರೊಂದು ರಸ್ತೆಯಲ್ಲಿ ಮಗುಚಿದ ಪರಿಣಾಮ ಇಬ್ಬರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ನೇರಳಕಟ್ಟೆ ಸಮೀಪದ ಕೊಡಾಜೆ ಮಸೀದಿಯ ಬಳಿ ಅಪಾಯಕಾರಿ ತಿರುವಿನಲ್ಲಿ ಟ್ಯಾಂಕರ್ ಲಾರಿಯೊಂದು ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದಿದೆ.ಈ ಘಟನೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಸ್ಥಳಕ್ಕೆ ವಿಟ್ಲ ಪ್ರಭಾರ ಎಸ್.ಐ.ರಾಜೇಶ್ ಕೆ.ವಿ.ಬೇಟಿ ನೀಡಿದ್ದಾರೆ






