Thursday, April 11, 2024

ಕೊರೊನಾ ಸೋಂಕಿಗೆ ಬಾಲಿವುಡ್ ನ ಖ್ಯಾತ ನಿರ್ಮಾಪಕ ಅನಿಲ್ ಸೂರಿ ಬಲಿ

ಮುಂಬಯಿ: ಖ್ಯಾತ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಅವರು ಕೊರೊನಾ ವೈರಸ್‌ ಸೋಂಕಿಗೆ ಬಲಿಯಾಗಿದ್ದಾರೆ.
77 ವಯಸ್ಸಿನ ಇವರಿಗೆ ಜೂನ್‌ 2 ರಂದು ತೀವ್ರ ಜ್ವರ ಕಾಣಿಸಿಕೊಂಡು ನಂತರ ಉಸಿರಾಟದ ಸಮಸ್ಯೆ ಕೂಡಾ ತೀವ್ರವಾಗಿತ್ತು. ಜೂನ್‌ 3 ರಂದು ಮುಂಬೈನ ಖ್ಯಾತ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು ಅವರು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ ಎಂದು ಅವರ ಸಹೋದರ ರಾಜೀವ್ ಸೂರಿ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ನಂತರ ಅವರನ್ನು ಬುಧವಾರ ರಾತ್ರಿ ವೇಳೆಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಯ್ತು. ಗುರುವಾರ ಸಂಜೆ ಅವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಯಿತು. ಆದರೆ ಅಂದೇ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಅನಿಲ್‌ ಸೂರಿ ‘ಕರ್ಮಯೋಗಿ’ ಮತ್ತು ‘ರಾಜ್ ತಿಲಕ್’ನಂತಹ ಖ್ಯಾತ ಸಿನಿಮಾಗಳ ನಿರ್ಮಾಣ ಮಾಡಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...