ಬೆಂಗಳೂರು : ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ 2020-21ನೇ ಶೈಕ್ಷಣಿಕ ಸಾಲಿನ ಶಾಲೆ ಪುನರ್ ಆರಂಭದ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆದಿದ್ದು, ಯಾವಾಗ ಶಾಲೆ ಆರಂಭಿಸಬೇಕು ಎಂಬುದರ ಕುರಿತು ಸರ್ಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ ಕುಮಾರ ಸ್ಪಷ್ಠಪಡಿಸಿದರು.
ಕಲಬುರ್ಗಿಯಲ್ಲಿ ಮಾಧ್ಯಮದೊಂದಿಗೆ ಮಾತನಾದಿದ ಸಚಿವರು ಶಾಲೆ ಪುನರ್ ಆರಂಭಿಸುವ ಕುರಿತು ಪೋಷಕರು ಮತ್ತು ಸ್ಟೇಕ್ ಹೋಲ್ಡರ್ಸ್‍ಗಳ ಅಭಿಪ್ರಾಯ ಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪೋಷಕರು, ಸ್ಟೇಕ್ ಹೋಲ್ಡರ್ಸ್ ಹಾಗೂ ಶಿಕ್ಷಣ ತಜ್ಞರುಗಳ ಅಭಿಪ್ರಾಯ ಪಡೆದು ಕೇಂದ್ರ ಸರ್ಕಾರದ ಎಸ್.ಓ.ಪಿ. ಮಾರ್ಗಸೂಚಿಯನ್ವಯ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಕೊರೊನಾದಿಂದ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗುವುದರಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಹೊರೆಯಾಗದಂತೆ ಪಠ್ಯಕ್ರಮ ಸಿದ್ದಪಡಿಸಲು ಮತ್ತು ಮುಂದಿನ ಶೈಕ್ಷಣಿಕ ಚಟುವಟಿಕೆಯ ರೂಪುರೇಷೆ ಬಗ್ಗೆ ಡಿ.ಎಸ್.ಇ.ಆರ್.ಟಿ. ಅಧ್ಯಯನ ನಡೆಸುತ್ತಿದೆ ಎಂದು ಸಚಿವ ಎಸ್.ಸುರೇಶ ಕುಮಾರ ತಿಳಿಸಿದರು.

ಇತ್ತೀಚೆಗೆ ಆನ್‍ಲೈನ್ ಪಾಠ ಬೋಧನೆಗೆ ಎಲ್ಲೆಡೆ ಕೇಳಿಬರುತ್ತಿದೆ. ಆನ್‍ಲೈನ್ ಪಾಠ ಮಕ್ಕಳ ಮೇಲೆ ಯಾವ ರೀತಿಯಲ್ಲಿ ಪರಿಣಾಮ ಬೀರುತ್ತೆ, ಎಷ್ಟು ವಯಸ್ಸಿನ ಮಕ್ಕಳಿಗೆ ಆನ್‍ಲೈನ್ ಪಾಠ ಭೋಧಿಸಬಹುದು ಎಂಬುದರ ಬಗ್ಗೆ ನಿಮ್ಹಾನ್ಸ್‍ಗೆ ಪತ್ರ ಬರೆಯಲಾಗಿತ್ತು. ಇದೀಗ ಅವರಿಂದ ಉತ್ತರ ಬಂದಿದ್ದು, ಇದರ ಸಾಧಕ-ಬಾಧಕ ಚರ್ಚಿಸಿ ಆನ್‍ಲೈನ್ ಪಾಠದ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here