ಭುವನೇಶ್ವರ್ : ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಅರ್ಜುನ್ ಚರಣ್ ಸೇಥಿ ಜೂ.8 ರಂದು ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಭಾನುವಾರ ಅರ್ಜುನ್ ಚರಣ್ ಸೇಥಿ (79) ಆಸ್ಪತ್ರೆಗೆ ದಾಖಲಾಗಿದ್ದರು. ಭದ್ರಾಕ್ ಲೋಕಸಭಾ ಕ್ಷೇತ್ರದಿಂದ 8 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು ಹಾಗೂ 2000-2004 ರವರೆಗೆ ಅಟಲ್ ಬಿಹಾರಿ ವಾಜಪೇಯಿ ಅವರ ಎನ್ ಡಿ ಎ ಸರ್ಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದರು.

ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಸೇಥಿ,  ಮೃದು ಮಾತಿನ ವ್ಯಕ್ತಿತ್ವ ಉಳ್ಳವರಾಗಿದ್ದರು. ಎರಡು ಬಾರಿ ಒಡಿಶಾ ವಿಧಾನಸಭೆಗೂ ಆಯ್ಕೆಯಾಗಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here