ಬಂಟ್ವಾಳ:  ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರಾಗಿದ್ದ ಜೋಸೆಫ್ ಡೇನಿಸ್ ಮಿರಾಂಡ ರವರು ತಮ್ಮ ಸೇವಾ ಅವಧಿಯಲ್ಲಿ ನಿಗದಿತ ಆದಾಯಕ್ಕಿಂತಲೂ ಮೀರಿ ಹೆಚ್ಛಿನ ಆಸ್ತಿಗಳನ್ನು ಹೊಂದಿದ್ದಾರೆಂದು 2017ರ ಡಿಸೆಂಬರ್ 12 ರಂದು ಆಗಿನ ಭ್ರಷ್ಟಾಚಾರ ನಿಗ್ರಹ ದಳದ ಡಿ. ವೈ.ಎಸ್.ಪಿ. ಸುಧೀರ್ ಹೆಗ್ಡೆ ಮತ್ತು ಇನ್ಸ್ಪೆಕ್ಟರ್ ಯೋಗೀಶ್ ಕುಮಾರ್ ತಂಡ ಕೇಸು ದಾಖಲಿಸಿ, ದಾಳಿ ನಡೆಸಿ ಹಲವು ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದರು. ಸುಮಾರು ಒಂದು ಕೋಟಿ ಏಳು ಲಕ್ಷದಷ್ಟು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಪತ್ತೆಯಾದ ಬಗ್ಗೆ ವರದಿಯಾಗಿತ್ತು.

ಬಂಧನದ ಬೀತಿಯಿಂದ ಆರೋಪಿಯು ಮಾನ್ಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ವಿರೋಧಿ ಖಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಮಂಗಳೂರಿನ ಮೂರನೇ ಸೆಷೆನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ರವರು ವಜಾಗೊಳಿಸಿ 2020 ರ ಜೂ. 9 ರಂದು ಆದೇಶಿಸಿದರು.

ಭ್ರಷ್ಟಾಚಾರ ನಿಗ್ರಹದಳದ ಪರ ವಕೀಲ ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್.ಎನ್. ರಾಜೇಶ್ ಆರೋಪಿಯ ಜಾಮೀನು ಅರ್ಜಿಗೆ ಪ್ರಬಲ ಆಕ್ಷೇಪ ವ್ಯಕ್ತಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶ ಬಿ. ಬಿ. ಜಕಾತಿ ರವರು ಆರೋಪಿ ಜೋಸೆಫ್ ಡೇನಿಸ್ ಮಿರಾಂಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.

ಈ ಮೊದಲು ಮಾನ್ಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮತ್ತು ಭ್ರಷ್ಟಾಚಾರ ಕಾಯಿದೆಯ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾದೀಶರಾಗಿದ್ದ ಬಿ. ಮುರಳೀಧರ ಪೈ ಯವರು ವರ್ಗಾವಣೆಗೊಂಡ ಬಳಿಕ ಬಿ.ಬಿ. ಜಕಾತಿ ಯವರು ಬೆಂಗಳೂರಿನಿಂದ ವರ್ಗಾವಣೆ ಗೊಂಡು ಬಂದಿದ್ದು,  ಜೂ.10 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ.

ದೊಡ್ಡ ಮೊತ್ತದ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ ಬಗ್ಗೆ ಆರೋಪವಿದ್ದು, ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಅಗತ್ಯವಿದ್ದಲ್ಲಿ ಬಂಧಿಸುವ ಸನ್ನಿವೇಶವನ್ನು ತಳ್ಳಿ ಹಾಕುವಂತಿಲ್ಲ ಎಂದು ಅಭಿಪ್ರಾಯ ಪಟ್ಟ ನ್ಯಾಯಧೀಶ ಬಿ.ಬಿ. ಜಕಾತಿ ಯವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪರ ವಿಶೇಷ ಸರಕಾರಿ ಅಭಿಯೋಜಕ ಮತ್ತು ನ್ಯಾಯವಾದಿ ಕೆ. ಎಸ್. ಎನ್. ರಾಜೇಶ್ ವಾದಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here