ಬಂಟ್ವಾಳ: ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮುಂಗಾರು ಚುರುಕಾಗಿರುವುದರಿಂದ ಜೂ. 11 ಮತ್ತು 12 ವರೆಗೆ ಯಲ್ಲೋ ಅಲರ್ಟ್ ಮತ್ತು ಜೂ. 13 ಮತ್ತು 14 ರ ವರೆಗೆ ಆರೆಂಜ್ ಅಲರ್ಟ್ ಇದ್ದು, ಹೆಚ್ಚು ಮಳೆಯಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ ಸಾರ್ವಜನಿಕರು ಎಚ್ಚರದಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದೆ.
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ದೂರವಾಣಿಗೆ ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here