


ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅಬ್ಬರ ಆರಂಭವಾಗಿದೆ. ಇಂದು ಬೆಳಗ್ಗೆಯಿಂದ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ.
ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಗುಡುಗು-ಸಿಡಿಲಿನ ಜೊತೆ ಮಳೆ ಸುರಿದಿದೆ.
ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಯ,ಬಂಟ್ವಾಳ ತಾಲೂಕಿನ ಹಲವೆಡೆ ಕೂಡ ಭಾರಿ ಮಳೆಯಾದ ಬಗ್ಗೆ ವರದಿಯಾಗಿದೆ.
ಉಡುಪಿ ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದೆ. ಇಂದು ಮುಂಜಾನೆಯಿಂದಲೇ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಮಳೆ ಸುರಿಯುತ್ತಿರುವ ಬಗ್ಗೆ ವರದಿಯಾಗಿದೆ.





