






ಬಂಟ್ವಾಳ: ಎಸ್. ಎಸ್.ಎಲ್.ಸಿ. ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಪರೀಕ್ಷೆ ನಡೆಯುವ ಶಾಲಾ ಸುತ್ತಮುತ್ತಲಿನ ಪ್ರದೇಶದಲ್ಲಿ 100 ಮೀಟರ್ ವ್ಯಾಪ್ತಿಯಲ್ಲಿ ಲಾಕ್ ಡೌನ್ ಗೆ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಮಂಗಳೂರು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಅವರು ಶುಕ್ರವಾರ ಬಿಸಿರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಎಸ್.ಎಸ್.ಎಲ್.ಸಿ.ಪರೀಕ್ಷೆ ಯ ಪೂರ್ವ ತಯಾರಿ ಬಗ್ಗೆ ನಡೆಸಿದ ಸಭೆಯಲ್ಲಿ ತಿಳಿಸಿದರು.
ಕೋವಿಡ್ -19 ನ ಸಮಯದಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ ಅತೀ ಮುಂಜಾಗ್ರತಾ ಕ್ರಮವಾಗಿ ಈ ವ್ಯವಸ್ಥೆ ಮಾಡಬೇಕು.
ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಶಾಲಾ ಅವರಣದೊಳಗೆ ಯಾರು ಬರಕೂಡದು ಎಂಬ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲು ಸೂಚಿಸುವುದಾಗಿ ಅವರು ತಿಳಿಸಿದ್ದಾರೆ.
ಸರಕಾರ ನಿಗದಿಪಡಿಸಿದಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯುತಿದ್ದು, ಇಲಾಖೆ ಸಕಲ ವ್ಯವಸ್ಥೆಯನ್ನು ಮಾಡಿದೆ ಎಂದು ಅವರು ತಿಳಿಸಿದರು.
ಪರೀಕ್ಷೆಗೆ ಗಡಿಭಾಗದ ವಿದ್ಯಾರ್ಥಿಗಳು ಆಗಮಿಸುವುದರಿಂದ ಅವರಿಗೆ ಬಾಕ್ರಬೈಲು ಹಾಗೂ ಎಡಮಾರಿ ಈ ಪ್ರದೇಶದಿಂದ ಬಸ್ ನ ವ್ಯವಸ್ಥೆ ಕಲ್ಪಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ಪ್ರತಿ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರೀಕ್ಷೆ ಬರೆಯಲು ಬೇಕಾದ ಸಂಪೂರ್ಣ ಜವಬ್ದಾರಿಯನ್ನು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ವಹಿಸಿ ಸುಸಜ್ಜಿತವಾಗಿ ಕಾರ್ಯ ನಿರ್ವಹಿಸಲಿದೆ. ಹಾಗಾಗಿ ವಿದ್ಯಾರ್ಥಿಗಳು ಭಯಪಡದೆ ಪರೀಕ್ಷೆ ಬರೆಯಲು ಅವರು ತಿಳಿಸಿದ್ದಾರೆ. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅವರ ಜೊತೆ ಪರೀಕ್ಷಾ ಪೂರ್ವತಯಾತಿ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ.
ಸರಕಾರದ ಸುತ್ತೋಲೆಯಂತೆ ಪರೀಕ್ಷೆ ನಡೆಯುವ ಕೇಂದ್ರದ ಸುತ್ತಲೂ 200 ಮೀಟರ್ ನಿಷೇಧಾಜ್ಞೆ ಇರುತ್ತದೆ. ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಬಗ್ಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ತಿಳಿಸಿದ್ದಾರೆ.
ಪರೀಕ್ಷೆ ವ್ಯವಸ್ಥೆಯ ಬಗ್ಗೆ ತಹಶೀಲ್ದಾರ್ ಕಚೇರಿಯಲ್ಲಿ ಜೂನ್ 15 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ಸಭೆ ಕರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಮಮತ ಗಟ್ಟಿ, ರವೀಂದ್ರ ಕಂಬಳಿ, ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಮಾಜಿ ಜಿ.ಪಂ.ಸದಸ್ಯ ಉಮ್ಮರ್ ಫಾರೂಕ್, ಪ್ರಮುಖರಾದ ಉಮ್ಮರ್ ಪಜೀರು, ಹೈದರ್ ಕೈರಂಗಳ ಮತ್ತಿತರರು ಉಪಸ್ಥಿತರಿದ್ಧರು.





