


ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಜಾರಿ ಮಾಡುವ ಅವಶ್ಯಕತೆಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಲಾಕ್ ಡೌನ್ ಕುರಿತಾಗಿ ಮಂಗಳವಾರ ವರದಿಗಾರರಲ್ಲಿ ಮಾತನಾಡಿದ ಅವರು, ಜನರು ಈಗ ಸಹಜವಾದ ಜೀವನ ನಡೆಸಲು ಅವಕಾಶ ನೀಡಲಬೇಕಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬಳಿ ಈ ಸಂವಾದ ನಡೆಸುವಾಗ ಇನ್ನಷ್ಟು ವಲಯಗಳ ವಿನಾಯಿತಿಗೆ ಮನವಿ ಮಾಡುತ್ತೇನೆ” ಎಂದು ಹೇಳಿದ್ದಾರೆ.
ಭಾನುವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೂಡಾ ಈ ಬಗ್ಗೆ ಸ್ಪಷ್ಟನೆ ನೀಡಿ, “ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ” ಎಂದು ಹೇಳಿದ್ದರು. ಹಾಗೆಯೇ ಸಿಎಂ ಬಿಎಸ್ವೈ ಅವರ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ”ರಾಜ್ಯ ಸರ್ಕಾರವು ಲಾಕ್ಡೌನ್ ಮಾಡಲು ಚಿಂತನೆ ನಡೆಸಿಲ್ಲ” ಎಂದು ಹೇಳಿದ್ದರು.





