ಮಂಗಳೂರು : ಈ ವರ್ಷದ ಮೊದಲ ಸೂರ್ಯ ಗ್ರಹಣವು ಜೂ. 21ರಂದು ಗೋಚರಿಸಲಿದ್ದು, ಇದಕ್ಕೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚೂಡಾಮಣಿ ಸೂರ್ಯಗ್ರಹಣ ಎಂದು ಕರೆಯಲಾಗಿದೆ.

ಜೂ.21 ರ ಆದಿತ್ಯವಾರ ಬೆಳಿಗ್ಗೆ ಸುಮಾರು 10.13ರಿಂದ ಮಧ್ಯಾಹ್ನ 1.32ರವರೆಗೆ ಈ ಗ್ರಹಣ ಸಂಭವಿಸಲಿದೆ. ಈ ಗ್ರಹಣದ ಕಾರಣದಿಂದಾಗಿ ದೇವಾಲಯಗಳಿಗೆ ಹೆಚ್ಚಿನ ಜನರು ಬರುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ದೇವಾಲಯದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇನ್ನು ಈ ಬಗ್ಗೆ ಗಾಳಿ ಆಂಜನೇಯ ದೇವಸ್ಥಾನದ ಅರ್ಚಕ ಡಾ.ಶ್ರೀನಿವಾಸ್ ಭಟ್ಟಾಚಾರ್ಯ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ದೇವಾಲಯಕ್ಕೆ ಬರುವ ಭಕ್ತರು ನಿಯಮಗಳನ್ನು ಉಲ್ಲಂಘಿಸಬಾರದು. ಹಿರಿಯರು, ಮಕ್ಕಳು ದೇವಾಲಯಕ್ಕೆ ಬರದೇ ಮನೆಯಲ್ಲೇ ಪೂಜೆ ಸಲ್ಲಿಸಿ ಎಂದು ಹೇಳಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here