ಬಂಟ್ವಾಳ : ಮಾಜಿ ಸಚಿವ ಬಿ.ರಮಾನಾಥ ರೈ ಅವರ ಬಗ್ಗೆ ಅವಹೇಳನ ಕಾರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಆರೋಪಿ ಯ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಪುತ್ತೂರು ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿರುವ ಜಗದೀಶ್ ಕಜೆ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ದೂರು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ವಿಧಾನಸಭೆಗೆ ಅಯ್ಕೆಯಾಗಿ ಕರ್ನಾಟಕ ಘನಸರ್ಕಾರದ ಗೃಹ, ಅರಣ್ಯ ,ಸಾರಿಗೆ ,ಬಂದರು ಮತ್ತು ಮೀನುಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿರುವ, ಧಾರ್ಮಿಕ, ಸಾಮಾಜಿಕ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡು ಜನಮನ್ನಣೆ ಗಳಿಸಿರುವ ಬೆಳ್ಳಿಪ್ಪಾಡಿ ರಮಾನಾಥ್ ರೈ ಇವರನ್ನು ಅವಹೇಳನ ಕಾರಿಯಾಗಿ ನಿಂದಿಸಿ ಫೇಸ್ಬುಕ್ ನಲ್ಲಿ ಪೊಸ್ಟ್ ಹಾಕಿರುವ ಉಮೇಶ್ ಆರ್ಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮಕ್ಕಾಗಿ ಬಂಟ್ವಾಳ ನಗರ ಠಾಣೆಯಲ್ಲಿ ಪುತ್ತೂರು ಸಾಮಾಜಿಕ ಜಾಲತಾಣದ ಉಸ್ತುವಾರಿಯಾಗಿರುವ ಜಗದೀಶ್ ಕಜೆ ಅವರು ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆಸಿ ಅಶೋಕ್ ಶೆಟ್ಟಿಮತ್ತು ಪುತ್ತೂರು ಬ್ಲಾಕ್ ಕಾಂಗ್ರೆಸ್ ನ ಮಾಜಿ ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಜತೆಗಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here