ನವದೆಹಲಿ: ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನ ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿ ವಜಾ ಆಗಿದೆ. ಈ ಹಿನ್ನೆಲೆ ನಿಗದಿಯಂತೆ ಜೂ. 25 ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಯಲಿದೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರೋದ್ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನ ನಡೆಸೋದು ಸೂಕ್ತವಲ್ಲ. ಈ ವರ್ಷ ಓದಿರುವ ಹತ್ತನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನ ಪಾಸ್​ ಮಾಡುವಂತೆ ಕೋರಿ ರಾಜಶ್ರೀ ಅವರು ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ.ಎಲ್.ನಾಗೇಶ್ವರ ರಾವ್, ನ್ಯಾ.ಕೃಷ್ಣ ಮುರಾರಿ, ನ್ಯಾ.ಎಸ್ ರವೀಂದ್ರ ಭಟ್​ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ಅರ್ಜಿ ವಿಚಾರಣೆಗೆ ಯೋಗ್ಯವಾಗಿಲ್ಲ. ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ. ಅಲ್ಲದೆ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶ ಮಾಡುವುದು ಸರಿಯಲ್ಲ ಅಂತಾ ಸುಪ್ರೀಂಕೋರ್ಟ್​ ಅಭಿಪ್ರಾಯ ವ್ಯಕ್ತಪಡಿಸಿತು. ಈ ಸಮಯದಲ್ಲಿ ರಾಜ್ಯ ಸರ್ಕಾರದ ಪರ ಆಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಜರಾಗಿದ್ದರು. ಇದಕ್ಕೂ ಮೊದಲು ರಾಜಶ್ರೀ ಪರೀಕ್ಷೆಯನ್ನ ರದ್ದು ಮಾಡುವಂತೆ ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಇಲ್ಲಿ ಅರ್ಜಿ ತಿರಸ್ಕೃತವಾದ ಮೇಲೆ ಅವರು ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು ಎಂಬ ಮಾಹಿತಿ ಇದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here