ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಬಿಂಬಿಸುವ  ವರದಿಗೆ  ನೀಡಲಾಗುವ `ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
2019ನೇ ವರ್ಷದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯಸ್ಸು 45 ಮೀರಿರಬಾರದು. ಪ್ರಶಸ್ತಿ 5,001 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ.
ಪ್ರಶಸ್ತಿಗೆ 2019ರ ಜ.1ರಿಂದ ಡಿ.31ರವರೆಗಿನ ವರದಿಗಳನ್ನು ಪರಿಗಣಿಸಲಾಗುವುದು.
ಪ್ರಶಸ್ತಿಗಾಗಿ ಅರ್ಜಿಸಲ್ಲಿಸುವವರು ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿಯ ನಾಲ್ಕು ಪ್ರತಿಗಳನ್ನು (ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು.  ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ. ಅರ್ಜಿಗಳನ್ನು ಕಳುಹಿಸಲು 2020 ಜೂನ್ 25 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ವಿಳಾಸ: ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಲೇಡಿಹಿಲ್ ,ಉರ್ವ ಮಾರ್ಕೆಟ ರಸ್ತೆ, ಮಂಗಳೂರು-6 ಇಲ್ಲಿಗೆ ಕಳುಹಿಸುವಂತೆ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here