


ಬಂಟ್ವಾಳ: ರಾಹುಲ್ ಗಾಂಧಿ ಅವರ ಹುಟ್ಟುಹಬ್ಬದ ಪ್ರಯುಕ್ತ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಲೆತ್ತೂರು ಪರಿಸರದ ಬಡ ಜನರಿಗೆ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಪಾಣೆಮಂಗಳೂರು ಬ್ಲಾಕ್ ಮತ್ತು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಇದರ ವತಿಯಿಂದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ. ಶೆಟ್ಟಿ, ಮಾಜಿ ಪುರಸಭಾ ನಾಮ ನಿರ್ದೇಶಿತ ಸದಸ್ಯ ಲೋಕೇಶ್ ಸುವರ್ಣ ಮುಂತಾದವರು ಉಪಸ್ಥಿತರಿದ್ದರು.





