


ಬೆಂಗಳೂರು : ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೋರ್ವ ಪೊಲೀಸ್ ಸಿಬ್ಬಂದಿ ಬಲಿಯಾದ ಬಗ್ಗೆ ವರದಿಯಾಗಿದೆ.
ಕಲಾಸಿಪಾಳ್ಯ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ 54 ವರ್ಷದ ಹೆಡ್ ಕಾನ್ಸ್ಟೆಬಲ್ ಶನಿವಾರ(ಇಂದು) ಬೆಳಿಗ್ಗೆ ಸಾವನ್ನಪ್ಪಿದ್ದಾರೆ.
ಎರಡು ದಿನಗಳ ಹಿಂದೆ ಕಲಾಸಿಪಾಳ್ಯ ಠಾಣೆಯ ಹೆಡ್ಕಾನ್ಸ್ಟೆಬಲ್ ಸೇರಿದಂತೆ ಎಂಟು ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿದ್ದ ಪೈಕಿ ಹೆಡ್ ಕಾನ್ಸ್ಟೆಬಲ್ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಶನಿವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಬೆಂಗಳೂರು ವಿಲ್ಸನ್ ಗಾರ್ಡನ್ ಠಾಣೆಯ 59 ವರ್ಷದ ಎಎಸ್ಐಯೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆಯನ್ನು ಸ್ಯಾನಿಟೈಸಿಂಗ್ ಮಾಡಲಾಗಿದೆ ಎಂಬ ಮಾಹಿತಿ ಇದೆ.





