ಪುತ್ತೂರು: ಇಲ್ಲಿನ ವಿವಾಹಿತ ಮಹಿಳೆಯೊಬ್ಬರು ಡೆಂಗ್ಯೂ ‌ಜ್ವರಕ್ಕೆ ಬಲಿಯಾಗಿದ್ದಾರೆ. ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ನಜೀರ್ ಮಾಸ್ಟರ್ ಅವರ ಪತ್ನಿ ನಸೀಮಾ (32) ಮೃತಪಟ್ಟ ಮಹಿಳೆ. ತಾಲೂಕಿನಲ್ಲಿ ಡೆಂಗ್ಯೂ ಜ್ವರಕ್ಕೆ ಬಲಿಯಾದ ಎರಡನೆ ಪ್ರಕರಣ ಇದು. ಒಂದು ವಾರದ ಹಿಂದೆ ಬೆಟ್ಟಂಪಾಡಿಯಲ್ಲಿ ಮಹಿಳೆಯೊಬ್ಬರು ಡೆಂಗ್ಯೂ ‌ಜ್ವರಕ್ಕೆ ಮೃತಪಟ್ಟಿದ್ದರು.

ನಸೀಮಾ ಅವರು ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದು, ಪುತ್ತೂರಿನಲ್ಲೇ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ಉಲ್ಭಣಗೊಂಡ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತಿ, ಮೂವರು ಪುತ್ರರನ್ನು ಅಗಲಿದ್ದಾರೆ. ಜನವರಿಯಿಂದ ಜೂನ್‌ ತಿಂಗಳವರೆಗೆ ಸುಮಾರು 110 ಡೆಂಗ್ಯೂ ಪ್ರಕರಣಗಳು ಜಿಲ್ಲೆಯಲ್ಲಿ ದಾಖಲಾಗಿದೆ ಎಂಬ ಮಾಹಿತಿ ಇದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here