



ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಸಾರ್ವಜನಿಕರು ಅನಗತ್ಯ ಓಡಾಟ ನಿಲ್ಲಿಸಬೇಕೆಂದು ಕಂದಾಯ ಸಚಿವ ಆರ್. ಅಶೋಕ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಕೋವಿಡ್ ಸೋಂಕಿನ ಕುರಿತಾಗಿ ಟ್ವೀಟ್ ಮಾಡಿದ ಸಚಿವ ಆರ್.ಅಶೋಕ್ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರು ಅನಗತ್ಯ ಓಡಾಟ ನಿಲ್ಲಿಸುವ ಅಗತ್ಯವಿದೆ ಎಂದಿದ್ದಾರೆ. ಅದಲ್ಲದೇ ಅಗತ್ಯ ಕೆಲಸಗಳಿಗೆ ಹೊರಹೋಗುವಾಗ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯ ಮಾಡಬೇಕಿದೆ ಎಂದು ಎಂದು ಟ್ವಿಟ್ ಮಾಡಿದ್ದಾರೆ.
ಲಾಕ್ಡೌನ್ ತೆರವಾದ ಮೇಲೆ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಹೊರರಾಜ್ಯದಿಂದ ಬಂದವರಿಂದ ಸೋಂಕು ಹೆಚ್ಚಾಗಿ ಕಂಡು ಬರುತ್ತಿರುವುದರೊಂದಿಗೆ ಇಲ್ಲಿರುವವರಲ್ಲೂ ಕೂಡ ಸೋಂಕು ಕಂಡುಬಂದಿದೆ. ಇದರಿಂದಾಗಿ ಜನ ಸ್ವಯಂ ಜಾಗೃತಿ ವಹಿಸಬೇಕಾದ ಅಗತ್ಯ ಮತ್ತು ಅನಿವಾರ್ಯತೆ ಇದೆ. ಸೋಂಕಿನ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದ್ದು, ನಿರ್ಲಕ್ಷ್ಯ ಧೋರಣೆ ಅನುಸರಿಸಬಾರದು ಎಂದು ಮನವಿ ಮಾಡಿದ್ದಾರೆ.
.






