ಬೆಂಗಳೂರು: ಕೊವಿಡ್ ಸೊಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಪತ್ನಿ ಹಾಗೂ ಪುತ್ರಿಗೂ ಕೊವಿಡ್-19 ಸೋಂಕು ಅಂಟಿಕೊಂಡಿದೆ.

ನಿನ್ನೆಯಷ್ಟೇ (ಸೋಮವಾರ) ಡಾ.ಕೆ.ಸುಧಾಕರ್ ಅವರ 82 ವರ್ಷದ ತಂದೆಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿತ್ತು. ಆ ನಂತರ ಕುಟುಂಬ ಇತರೆ ಸದಸ್ಯರ ರಕ್ತ ಹಾಗೂ ಗಂಟಲು ಸ್ರಾವದ ಮಾದರಿಯನ್ನು ತಪಾಸಣೆಗೆ ಕಳುಹಿಸಿ ಕೊಡಲಾಗಿತ್ತು. ಈ ಹಿನ್ನೆಲೆ ಇದೀಗ ಪತ್ನಿ ಮತ್ತು ಮಗಳಿಗೂ ಸೋಂಕು ತಗುಲಿದೆ ಎಂದು ಸಚಿವರು ಟ್ವೀಟ್ ಮಾಡಿದ್ದರು.

ಮಂಗಳವಾರ ಎಲ್ಲರ ವೈದ್ಯಕೀಯ ತಪಾಸಣಾ ವರದಿಯು ಬಂದಿದ್ದು, “ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ.” ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here