



ಬಂಟ್ವಾಳ: ರಾಜ್ಯದಲ್ಲಿ ಇಂದು 322 ಹೊಸ ಕೊರೋನಾ ಕೇಸ್ ಪತ್ತೆಯಾಗಿದೆ.
ಒಟ್ಟು ಸೋಂಕಿತರ ಸಂಖ್ಯೆ 9721 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 107, ಬಳ್ಳಾರಿ 53, ಬೀದರ್ 22, ಮೈಸೂರು 21, ವಿಜಯಪುರ 16, ಯಾದಗಿರಿ 13, ಉಡುಪಿ 11, ಗದಗ 9, ದ.ಕ., ಕೋಲಾರ ತಲಾ 8, ಹಾಸನ 7, ಕಲಬುರಗಿ 6, ಚಿಕ್ಕಬಳ್ಳಾಪುರ, ಶಿವಮೊಗ್ಗ ತಲಾ 5, ಧಾರವಾಡ, ತುಮಕೂರು, ಕೊಪ್ಪಳ, ಚಾಮರಾಜನಗರ ತಲಾ 4, ರಾಯಚೂರು, ಉ.ಕ. ತಲಾ 3, ಮಂಡ್ಯ, ಬೆಳಗಾವಿ, ಹಾವೇರಿ, ದಾವಣಗೆರೆ ತಲಾ 2, ಕೊಡಗು 1 ಕೇಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು ಒಂದೇ ದಿನ 274 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, 8 ಸೋಂಕಿತರು ಮೃತಪಟ್ಟಿದ್ದಾರೆ.






