ಬಂಟ್ವಾಳ: ಕಳೆದ 10 ವರ್ಷಗಳಿಂದ ಬಂಟ್ವಾಳ ಪುರಸಭಾ ಕಚೇರಿಯಲ್ಲಿ ಕಾರ್ಯಾಚರಿಸುತ್ತಿದ್ದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ(ಬೂಡಾ) ದ ಕಚೇರಿ ಕೊನೆಗೂ ಬಿ.ಸಿ.ರೋಡಿಗೆ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಗೊಂಡಿದೆ.


ಕಳೆದ 2 ವರ್ಷದ ಹಿಂದೆ ಬಿ.ಸಿ.ರೋಡಿನ ಪುರಸಭಾ ಕಟ್ಟಡದಲ್ಲಿ ಬುಡಾ ಕಚೇರಿ ಉದ್ಘಾಟನೆಗೊಂಡಿದ್ದರೂ, ತಾಂತ್ರಿಕ ಕಾರಣಗಳಿಂದ ಪೂರ್ಣ ಪ್ರಮಾಣದ ಕಚೇರಿ ಸ್ಥಳಾಂತರಗೊಂಡಿರಲಿಲ್ಲ.
ಕಳೆದ ಮಾರ್ಚ್ ತಿಂಗಳಲ್ಲಿ ಸರಕಾರ ಬುಡಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಿ.ದೇವದಾಸ ಶೆಟ್ಟಿಯವರ ಮುತುವರ್ಜಿಯಲ್ಲಿ ಕಳೆದ ಜೂ. 15 ರಿಂದ ಬಿ.ಸಿ.ರೋಡಿನಲ್ಲಿ ಬೂಡಾ ಕಚೇರಿ ಮುನ್ನಡೆಯುತ್ತಿದೆ.

ಮುಂದಿನ ದಿನಗಳಲ್ಲಿ ಯೋಜನಾ ಪ್ರಾಧಿಕಾರಕ್ಕೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳು ಕೂಡ ಇದೇ ಕಚೇರಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಬೂಡಾ ಅಧ್ಯಕ್ಷ ದೇವದಾಸ ಶೆಟ್ಟಿ ತಿಳಿಸಿದ್ದಾರೆ.

ಸಿಂಗಲ್ ಲೇಔಟ್ ಸಮಸ್ಯೆಗೆ ಮುಕ್ತಿ
ಜೂ.19ರಂದು ಬೆಂಗಳೂರಿನಲ್ಲಿ ಸಚಿವರುಗಳು ಹಾಗೂ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಭೆ ನಡೆದಿದ್ದು, ಸಭೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಮೂಲಕ ತುಂಡು ಭೂಮಿಯ ಪರಿವರ್ತನೆ(ಸಿಂಗಲ್ ಲೇಔಟ್), ಏರಿಕೆಯಾದ ಅಭಿವೃದ್ಧಿ ಶುಲ್ಕವನ್ನು ಕಡಿಮೆ ಮಾಡುವ ಕುರಿತು ಸಂಬಂಧಪಟ್ಟವರ ಗಮನಕ್ಕೆ ತರಲಾಗಿದ್ದು, ಒಂದು ತಿಂಗಳೊಳಗೆ ಅದಕ್ಕೆ ಪರಿಹಾರ ಸಿಗಲಿದೆ.
ಮುಂದೆ ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಬುಡಾ ಕಾರ್ಯನಿರ್ವಹಿಸಲಿದೆ ಎಂದು ದೇವದಾಸ್ ಶೆಟ್ಟಿ ತಿಳಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here