



ಬೆಳ್ತಂಗಡಿ: ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ನೂತನವಾಗಿ ಆಯ್ಕೆಯಾಗಿರುವ ಪ್ರತಾಪ್ ಸಿಂಹ ನಾಯಕ್ ಮಂಜುನಾಥನ ಆಶೀರ್ವಾದ ಪಡೆಯಲು ಧರ್ಮಸ್ಥಳ ಮಂಜುನಾಥೇಶ್ವರ ಸನ್ನಿಧಿಗೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದವನ್ನು ಪಡೆದರು.
ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಕೂಡ ಉಪಸ್ಥಿತರಿದ್ದು, ಮಂಜುನಾಥನ ಆಶೀರ್ವಾದದೊಂದಿಗೆ ಸ್ವಾಮಿಯ ದರ್ಶನ ಪಡೆದರು.





