ಬಂಟ್ವಾಳ:  ಇರಾ ಗ್ರಾಮ ಪಂಚಾಯತ್ ನ ಹಾಲಿ ಸಮಿತಿಯ ಅಧಿಕಾರವದಿ ಕೊನೆಗೊಳ್ಳುತ್ತಿರುವ ಸಂದರ್ಭದಲ್ಲಿ ಕೊನೆಯ ಸಾಮಾನ್ಯ ಸಭೆಯು ಇಂದು ಇರಾ ಕಲ್ಲಾಡಿ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆದು, ಹಲವು ದೂರ ದೃಷ್ಟಿ ಯೋಜನೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಟಿ.ಸುಧಾಕರ್, ತುಳಸಿ ಪಿ. ಪೂಜಾರಿ, ಮೊಯಿದಿನ್ ಕುಂಞಿ, ಎಂ.ಬಿ. ಉಮ್ಮರ್, ಗೋಪಾಲ ಅಶ್ವತ್ಥಡಿ, ರಮೇಶ್ ಪೂಜಾರಿ, ಸಿಸಿಲಿಯಾ ಇವರುಗಳು ಮಾತನಾಡಿ, ಗ್ರಾಮದ ಅಭಿವೃದ್ಧಿಗಾಗಿ ಶ್ರಮಿಸಿದ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ, ಪಂಚಾಯತ್ ಸಿಬ್ಬಂದಿ ವರ್ಗಕ್ಕೆ, ಕೃತಜ್ಞತೆ ಸಲ್ಲಿಸಿದರು.

ಸಭೆಯ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಮಾತನಾಡಿ, 2ನೇ ಬಾರಿ 5 ವರ್ಷಗಳ ಅವಧಿಯಲ್ಲಿ ಗ್ರಾ.ಪಂ. ಅಧ್ಯಕ್ಷನಾಗಿ ಕಾರ್ಯನಿರ್ವಹಿಸಲು ಪಕ್ಷಾತೀತವಾಗಿ ಬೆಂಬಲಿಸಿದ ಕ್ಷೇತ್ರದ ಶಾಸಕ, ಮಾಜಿ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ. ಸದಸ್ಯೆ ಮಮತಾ ಡಿ.ಎಸ್. ಗಟ್ಟಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರಾ, ಗ್ರಾಮ ಪಂಚಾಯತ್ ಸದಸ್ಯರಿಗೆ, ವಿವಿಧ ಇಲಾಖೆಯ ಅಧಿಕಾರಿ ವರ್ಗಕ್ಕೆ, ಪಂಚಾಯತ್ ಸಿಬ್ಬಂದಿಗಳಿಗೆ ಹಾಗೂ ಗ್ರಾಮಸ್ಥರಿಗೆ ಸಹಕಾರಕ್ಕಾಗಿ ಅಭಿನಂದಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲಾ ಸ್ವಾಗತಿಸಿ, ಕಾರ್ಯದರ್ಶಿ ನಳಿನಿ.ಎ.ಕೆ., ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಸಭೆ ಮುಕ್ತಾಯಗೊಂಡಿತ್ತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here