Tuesday, April 16, 2024

ಬೆಳ್ತಂಗಡಿ: ಮನೆ ಮಂದಿಯನ್ನು ಕಟ್ಟಿಹಾಕಿ ನಗ-ನಗದು ದರೋಡೆ

ಬೆಳ್ತಂಗಡಿ: ಶುಕ್ರವಾರ ಮುಂಜಾನೆ ಅಡಿಕೆ ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರು ಮನೆಮಂದಿಯನ್ನು ಕಟ್ಟಿಹಾಕಿ 13 ಲಕ್ಷ‌ರೂ. ಮೌಲ್ಯದ ನಗ ನಗದು ದರೋಡೆ ಮಾಡಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತಾಲೂಕಿನ ಕಲ್ಮಂಜ ಗ್ರಾಮದ ನೀರ ಚಿಲುಮೆ ಎಂಬಲ್ಲಿಯ ನಿವಾಸಿ ಅಚ್ಯುತ ಭಟ್ ಅವರ ಮನೆಗೆ ಮುಂಜಾನೆ 2.30 ರ ಸುಮಾರಿಗೆ ನುಗ್ಗಿದ ನಾಲ್ವರು ಮುಸುಕಧಾರಿಗಳ ದರೋಡೆಕೋರರ ತಂಡ 40 ಪವನ್ ಚಿನ್ನ, ಒಂದು ಕೆಜಿ ಬೆಳ್ಳಿ, 25 ಸಾವಿರ ರೂ. ದೋಚಿದ್ದಾರೆ ಎಂಬ ವರದಿಯಾಗಿದೆ.
ಉಜಿರೆಯಲ್ಲಿ ಅಡಿಕೆ ವ್ಯಾಪಾರ ಮಾಡುವ ಅಚ್ಯುತ ಭಟ್, ಮುಂಜಾನೆ ನಾಯಿ ಬೊಗಳಿದ್ದನ್ನು ಕೇಳಿ ಹೊರಬಂದಿದ್ದು, ಈ ವೇಳೆ ಒಳನುಗ್ಗಿದ ದರೋಡೆಕೋರರು ಅವರನ್ನು ಸಹಿತ ಮನೆಮಂದಿ ಎಲ್ಲರನ್ನೂ ಕಟ್ಟಿಹಾಕಿ, ಪೊಲೀಸರಿಗೆ ಮಾಹಿತಿ ನೀಡಿದರೆ ಮನೆಮಂದಿಯ ಜೀವಹಾನಿ ಮಾಡುವುದಾಗಿ ಬೆದರಿಕೆ ಹಾಕಿ ದರೋಡೆ ಮಾಡಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್.ಪಿ.ಜಿ , ಧರ್ಮಸ್ಥಳ ಪಿಎಸ್ಐ ಪವನ್ ನಾಯ್ಕ್ ಮತ್ತು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...