ಬಂಟ್ವಾಳ ಗ್ರಾಮೀಣ ಭಾಗಗಳ ರಸ್ತೆ, ಕಾಲುಸಂಕ, ಸೇತುವೆ ಮೊದಲಾದ ಅಭಿವೃದ್ಧಿ ಕಾರ್ಯಗಳಿಗೆ ಬಂಟ್ವಾಳ ಶಾಸಕರು ವಿಶೇಷ ಕಾಳಜಿ ತೋರಿ 6.50 ಕೋ.ರೂ.ಗಳಿಗೂ ಅಧಿಕ ಮೊತ್ತದ ಅನುದಾನ ನೀಡಿದ್ದು, ಅವರಿಗೆ ಸರಕಾರದ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಶನಿವಾರ ಬಂಟ್ವಾಳ ಕ್ಷೇತ್ರದ 5 ಗ್ರಾಮಗಳಲ್ಲಿ ಒಟ್ಟು 6.67 ಕೋ.ರೂ.ಗಳ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ-ಉದ್ಘಾಟನೆ ನೆರವೇರಿಸಿ ಸುದ್ದಿಗಾರರ ಜತೆ ಮಾತನಾಡಿದರು.

ಶಾಸಕ ರಾಜೇಶ್ ನಾಯ್ಕ್  ಉಳಿಪ್ಪಾಡಿಗುತ್ತು ಮಾತನಾಡಿ, ಈ ದಿನ ಮಾಣಿ ಗ್ರಾಮದಲ್ಲಿ 1.53 ಕೋ.ರೂ, ಅನಂತಾಡಿಯಲ್ಲಿ 2.34 ಕೋ.ರೂ, ನೆಟ್ಲಮುಡ್ನೂರುನಲ್ಲಿ 1.25 ಕೋ.ರೂ, ಪೆರಾಜೆಯಲ್ಲಿ 66 ಲಕ್ಷ ರೂ, ಮಂಚಿಯಲ್ಲಿ 88.50 ಲಕ್ಷ ರೂ.ಒಟ್ಟು 6.67 ಕೋ.ರೂ. ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಾಗಿದೆ ಎಂದರು.

 

ಕಾರ್ಯಕ್ರಮದಲ್ಲಿ ಜಿ.ಪಂ.ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸ್ಥಳೀಯ ಮುಂದಾಳುಗಳು, ಬಿಜೆಪಿ ಪದಾಧಿಕಾರಿಗಳು ಮೊದಲಾದವರು ಪಾಲ್ಗೊಂಡಿದ್ದರು.

ಮಂಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯ ಎಂ.ಎಸ್.ಮಹಮ್ಮದ್, ಬಂಟ್ವಾಳ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಭಾಗವಹಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here