ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದ ಖೈದಿ ಹಾಗೂ ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಗಳೂರು ಗ್ರಾಮಾಂತರ ಠಾಣಾ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಬಗ್ಗೆ ವರದಿಯಾಗಿದೆ. ಮಂಗಳೂರು ಕೇಂದ್ರ ಕಾರಾಗೃಹದ ವಿಚಾರಣಾಧೀನ ಖೈದಿ ಮನೋರೋಗದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಈತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದ ಕಾರಣ ಈತನಿಗೆ ಆಸ್ಪತ್ರೆ ಸಿಬ್ಬಂದಿಯಿಂದಲೇ ಕೊರೊನಾ ಹರಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಮುನ್ನಚ್ಚೆರಿಕಾ ಕ್ರಮವಾಗಿ ಖೈದಿ ಜೊತೆ ಇದ್ದ ಪೊಲೀಸ್ ಸಿಬ್ಬಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ.
ಮಂಗಳೂರಿನ ವಾಮಂಜೂರು ಗ್ರಾಮಾಂತರ ಠಾಣೆ ಸಿಬ್ಬಂದಿಯೋರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರು ಈ ಹಿಂದೆ ಉಳ್ಳಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂಬ ಮಾಹಿತಿ ಇದೆ. ಉಳ್ಳಾಲ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಆರೋಪಿಯೊಬ್ಬನಲ್ಲಿ ಸೋಂಕು ದೃಢಪಟ್ಟಿದ್ದು, ಆತನ ಸಂಪರ್ಕದಿಂದ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇವರನ್ನು ಚಿಕಿತ್ಸೆಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here