ಮಂಗಳೂರು: ಇಲ್ಲಿನ ಲೇಡಿಗೋಶನ್ ಆಸ್ಪತ್ರೆಗೆ ಆರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಜೂ.31ರಿಂದ ಜು.6ರವರೆಗೆ ಆಸ್ಪತ್ರೆ ಸೀಲ್‌ಡೌನ್ ಮಾಡಿ ಆದೇಶ ಹೊರಡಿಸಿದೆ. ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗಳಿಗೆ ಕ್ವಾರೆಂಟೈನ್ ನಲ್ಲಿ ಇರಿಸಲಾದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ. ಆ ಮೂಲಕ ಒಳ ಹಾಗೂ ಹೊರರೋಗಿ ದಾಖಲಾತಿಗಳೆರಡೂ ಸ್ಥಗಿತಗೊಳ್ಳಲಿದೆ.
ಇನ್ನು ಸದ್ಯ ದಾಖಲಾದ ರೋಗಿಗಳ ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದು. ಎಬಿ-ಎಆರ್‌ಕೆ ಯೋಜನೆಯಡಿ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಇನ್ನು ಆಸ್ಪತ್ರೆ ಸಿಬ್ಬಂದಿಗಳಿಗೆ ಸೋಂಕು ತಗುಲಿರುವುದರಿಂದ ಫ್ಯೂಮಿಗೇಶನ್, ಸ್ಯಾನಿಟೈಸಿಂಗ್ ಮಾಡುವ ಉದ್ದೇಶದಿಂದ ಆಸ್ಪತ್ರೆ ಸೀಲ್‌ಡೌನ್ ಮಾಡಲಾಗಿದೆ ಎಂದು ಲೇಡಿಗೋಶನ್ ವೈದ್ಯಕೀಯ ಅಧೀಕ್ಷಕಿ ಡಾ. ಸವಿತಾ ಮಾಹಿತಿ ನೀಡಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here