

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಆತಂಕಕಾರಿ ಮಟ್ಟದಲ್ಲಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ ಎಲ್ಲಾ ರೀತಿಯಲ್ಲೂ ತಯಾರಾಗಿದೆ
ಎಸೆಸೆಲ್ಸಿ ಪರೀಕ್ಷೆ ಮುಕ್ತಾಯದ ಬಳಿಕ ಸೋಂಕು ಹರಡುವಿಕೆ ತಡೆಯುವ ಪ್ರಯತ್ನ ಮಾಡಲಾಗುತ್ತದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ವಿಧಾನಸೌಧದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜುಲೈ ಹಾಗೂ ಆಗಸ್ಟ್ ನಲ್ಲಿ ಕೊರೊನಾ ಹೆಚ್ಚಳವಾಗಬಹುದು ಎಂದು ತಜ್ಞರು ವರದಿ ನೀಡಿದ್ದಾರೆ. ಈ ವರದಿಯಂತೆಯೇ ಕೊರೋನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ. ಆಗ ಮಾತ್ರ ಕೊರೊನಾ ತಡೆ ಸಾಧ್ಯವಾಗುತ್ತದೆ. ಸದ್ಯ ಎಸೆಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈಗಲೇ ಕಠಿಣ ಕ್ರಮಕ್ಕೆ ಮುಂದಾದರೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಡ್ಡಿಯಾಗುತ್ತದೆ. ಹೀಗಾಗಿ ಎಸೆಸೆಲ್ಸಿ ಪರೀಕ್ಷೆ ಬಳಿಕ ಕಠಿಣ ನಿರ್ಧಾರ ಕೈಗೊಳ್ಳುವುದಾಗಿ ಸಚಿವ ಅಶೋಕ್ ಸ್ಪಷ್ಟ ಪಡಿಸಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ಕುರಿತು ಸಿಎಂ ಯಡಿಯೂರಪ್ಪ ಅಂತಿಮ ನಿರ್ಧಾರ ಕೈಗೊಳ್ಳಲಿದ್ದು, ಜು. 5 ರ ಬಳಿಕ ಹನ್ನೆರಡು ಅಥವಾ ಹದಿನೈದು ದಿನಗಳ ಲಾಕ್ ಡೌನ್ ಜಾರಿಯಾಗಬಹುದು ಎಂದು ಸುಳಿವು ನೀಡಿದ್ದಾರೆ.







